ಬೆಂಗಳೂರು: ರಾಜ್ಯದ 42 ಉತ್ಪನ್ನಗಳು ಹಾಗೂ ನಾಲ್ಕು ಲೋಗೊಗಳು ಜಿಯಾಗ್ರಾಫಿಕಲ್ ಇಂಡಿಕೇಷನ್ (ಜಿಐ) ಟ್ಯಾಗ್ ನೋಂದಣಿ ಹೊಂದಿವೆ ಎಂದು ಬೃಹತ್ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಹೇಳಿದರು.

ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಅಬ್ಬಯ್ಯ ಪ್ರಸಾದ್ ಪ್ರಶ್ನೆಗೆ ಉತ್ತರಿಸಿದ ಅವರು, ‘ಭಾರತದಲ್ಲಿ 370 ಜಿಯಾ ಗ್ರಾಫಿಕಲ್ ಇಂಡಿಕೇಷನ್ಗಳಿಗೆ ನೋಂದಣಿ ದೊರಕಿದೆ. ಜಿಐ ನೋಂದ ಣಿಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ’ ಎಂದರು.

‘ಈ ಉತ್ಪನ್ನಗಳಿಗೆ ಇನ್ನಷ್ಟು ಪ್ರಚಾರ ನೀಡಲು ಹಾಗೂ ಮಾರುಕಟ್ಟೆ ಒದಗಿಸಲು ವಿಮಾನ ನಿಲ್ದಾಣ ಪ್ರಾಧಿಕಾರದ ಜತೆಗೆ ಒಪ್ಪಂದ ಮಾಡಿಕೊಂಡು ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳಿಗೆಗಳನ್ನು ತೆರೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಮಳಿಗೆಗಳನ್ನು ತೆರೆಯಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.