ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹750 ಹೆಚ್ಚಾಗಿ ₹63,500ಕ್ಕೆ ಏರಿಕೆ ಕಂಡಿತು. ಬೆಳ್ಳಿ ಧಾರಣೆ ಕೆ.ಜಿಗೆ ₹800ರಷ್ಟು ಹೆಚ್ಚಾಗಿ ₹79 ಸಾವಿರದಂತೆ ಮಾರಾಟ ಆಯಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿದ್ದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.

ಡಾಲರ್ ಮೌಲ್ಯ ಇಳಿಕೆ ಕಂಡಿದೆ. ಇದರ ಜೊತೆಗೆ, ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಮುಂದಿನ ವರ್ಷದಿಂದ ಬಡ್ಡಿದರ ಇಳಿಕೆ ಮಾಡಲು ಆರಂಭಿಸಲಿದೆ ಎಂದು ಬ್ಯಾಂಕ್‌ನ ಅಧಿಕಾರಿಗಳು ಹೇಳಿಕೆ ನೀಡಿರುವುದು ಚಿನ್ನದ ದರ ಹೆಚ್ಚಳಕ್ಕೆ ಕಾರಣ ಆಯಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.