ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನದ ದರ ₹3,350 ಇಳಿಕೆ

Published 23 ಜುಲೈ 2024, 15:58 IST
Last Updated 23 ಜುಲೈ 2024, 15:58 IST
ಅಕ್ಷರ ಗಾತ್ರ

ನವದೆಹಲಿ: ಬಜೆಟ್‌ನಲ್ಲಿ ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕ ಕಡಿತಗೊಳಿಸುವುದಾಗಿ ಪ್ರಕಟವಾದ ಬೆನ್ನಲ್ಲೇ, ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಭಾರಿ ಇಳಿಕೆಯಾಗಿದೆ.

ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನದ ದರವು 10 ಗ್ರಾಂ ಗೆ ₹3,350 ಇಳಿಕೆಯಾಗಿ, ₹72,300ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ₹3,500 ಕಡಿಮೆಯಾಗಿ ₹87,500ಕ್ಕೆ ತಲು‍ಪಿದೆ.

ಕಳೆದ ಐದು ದಿನದ ವಹಿವಾಟಿನಲ್ಲಿ ಬೆಳ್ಳಿ ಧಾರಣೆ ₹6,900 ಇಳಿಕೆಯಾಗಿದ್ದರೆ, ಚಿನ್ನದ ದರವು ₹3,860 ಕಡಿಮೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT