ನವದೆಹಲಿ: ಬ್ಯಾಂಕ್ ಆಫ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕರಾಗಿ ರಜನೀಶ್ ಕರ್ನಾಟಕ್ ಮತ್ತು ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕರಾಗಿ ದೇವದತ್ ಚಂದ್ ಅವರನ್ನು ಕೇಂದ್ರ ಸರ್ಕಾರವು ಶನಿವಾರ ನೇಮಕ ಮಾಡಿದೆ.

ಬ್ಯಾಂಕ್ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ರಜನೀಶ್ ಅವರನ್ನು ಮೂರು ವರ್ಷಗಳ ಅವಧಿಗೆ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಕರನ್ನಾಗಿ ನೇಮಿಸಲಾಗಿದೆ ಎಂದು ಹಣಕಾಸು ಸೇವೆಗಳ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಅತನು ಕುಮಾರ್ ದಾಸ್ ಅವರ ಅಧಿಕಾರಾವಧಿಯು 2023ರ ಜನವರಿಗೆ ಅಂತ್ಯವಾಗಿರುವುದರಿಂದ ಅವರ ಸ್ಥಾನಕ್ಕೆ ರಜನೀಶ್ ಅವರನ್ನು ನೇಮಿಸಲಾಗಿದೆ.

ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಸಂಜೀವ್ ಚಡ್ಡಾ ಅವರ ಅವಧಿಯು ಜೂನ್ 30ರಂದು ಮುಗಿಯಲಿದ್ದು, ಜುಲೈ 1ರಂದು ದೇವದತ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.