ನವದೆಹಲಿ: ಕ್ಯಾನ್ಸರ್ ಗುಣಪಡಿಸಲು ನೀಡಲಾಗುತ್ತಿರುವ ಮೂರು ಜೀವ ರಕ್ಷಕ ಔಷಧಗಳ ಬೆಲೆ ಇಳಿಸುವಂತೆ ಔಷಧ ತಯಾರಿಕಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಮಂಗಳವಾರ ಸೂಚಿಸಿದೆ.

2024–25ನೇ ಸಾಲಿನ ಕೇಂದ್ರ ಬಜೆಟ್ನಲ್ಲಿ ಟ್ರಾಸ್ಟುಜುಮಾಬ್, ಒಸಿಮೆರ್ಟಿನಿಬ್ ಮತ್ತು ದುರ್ವಾಲುಮಾಬ್ ಔಷಧಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 10ರಿಂದ ಶೂನ್ಯಕ್ಕೆ ಕಡಿತಗೊಳಿಸಲಾಗಿದೆ.

ರೋಗಿಗಳಿಗೆ ಕೈಗೆಟುಕುವ ಬೆಲೆಗೆ ಈ ಔಷಧಗಳು ದೊರೆಯುವಂತೆ ಮಾಡಲು ಸರ್ಕಾರ ನಿರ್ಧರಿಸಿದೆ. ಗರಿಷ್ಠ ಮಾರಾಟ ದರವನ್ನು (ಎಂಆರ್ಪಿ) ಕಡಿತಗೊಳಿಸಿ ಪರಿಷ್ಕರಣೆ ಮಾಡಿರುವ ದರವನ್ನು ಔಷಧಗಳ ಮೇಲೆ ನಮೂದಿಸಬೇಕು ಎಂದು ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರವು (ಎನ್ಪಿಪಿಎ) ಸೂಚಿಸಿದೆ.

ಈಗಾಗಲೇ, ಈ ಔಷಧಗಳಿಗೆ ಕಸ್ಟಮ್ಸ್ ಸುಂಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ಸುಂಕ ಹಾಗೂ ಜಿಎಸ್ಟಿ ಕಡಿತ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಬೇಕು ಎಂದು ನಿರ್ದೇಶನ ನೀಡಿದೆ.

ಔಷಧಗಳ ದರದ ಪಟ್ಟಿಯನ್ನು ಡೀಲರ್ಗಳು ಮತ್ತು ರಾಜ್ಯ ಔಷಧ ನಿಯಂತ್ರಕರಿಗೆ ನೀಡಬೇಕು. ಎನ್ಪಿಪಿಎಗೆ ಈ ಕುರಿತು ಮಾಹಿತಿ ಸಲ್ಲಿಸಬೇಕು ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.