ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆರ್‌ಬಿಐ ಉಪ ಗವರ್ನರ್‌ ರಾಜೇಶ್ವರ ರಾವ್‌ ಅವಧಿ ಒಂದು ವರ್ಷ ವಿಸ್ತರಿಸಿದ ಕೇಂದ್ರ

Published : 5 ಅಕ್ಟೋಬರ್ 2024, 9:22 IST
Last Updated : 5 ಅಕ್ಟೋಬರ್ 2024, 9:22 IST
ಫಾಲೋ ಮಾಡಿ
Comments

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್‌ನ ಉಪ ಗವರ್ನರ್‌ ಎಂ. ರಾಜೇಶ್ವರ ರಾವ್ ಅವರ ಸೇವಾವಧಿಯನ್ನು ಒಂದು ವರ್ಷ ವಿಸ್ತರಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶಿಸಿರುವುದಾಗಿ ಮೂಲಗಳು ಹೇಳಿವೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಸಂಪುಟದ ನೇಮಕಾತಿ ಸಮಿತಿಯು (ACC) ರಾವ್ ಅವರನ್ನು ಒಂದು ವರ್ಷಗಳ ಅವಧಿಗೆ ಮರು ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿತು. ಇದು ಅ. 9ರಿಂದ ಕಾರ್ಯರೂಪಕ್ಕೆ ಬರಲಿದೆ. 

2016ರಲ್ಲಿ ರಾಜೇಶ್ವರ ರಾವ್ ಅವರು ಆರ್‌ಬಿಐನ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಗೆ ಬಡ್ತಿ ಹೊಂದಿದ್ದರು. 2020ರಲ್ಲಿ ಆರ್‌ಬಿಐನ ಉಪ ಗವರ್ನರ್ ಆಗಿ ಮೂರು ವರ್ಷಗಳ ಅವಧಿಗೆ ನೇಮಕಗೊಂಡರು. 

ಅರ್ಥಶಾಸ್ತ್ರ ವಿಷಯ ಪದವಿ ಹಾಗೂ ಕೊಚ್ಚಿ ವಿಶ್ವವಿದ್ಯಾಲಯದಿಂದ ಎಂಬಿಎ ಪೂರೈಸಿರುವ ರಾವ್ ಅವರು 1984ರಲ್ಲಿ ಕೇಂದ್ರೀಯ ಬ್ಯಾಂಕ್‌ಗೆ ನೇಮಕಗೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT