ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಹಾರ ಪರೀಕ್ಷೆಗೆ 100 ಲ್ಯಾಬ್‌ ಸ್ಥಾಪನೆ: ಕೇಂದ್ರ

Published : 19 ಸೆಪ್ಟೆಂಬರ್ 2024, 14:37 IST
Last Updated : 19 ಸೆಪ್ಟೆಂಬರ್ 2024, 14:37 IST
ಫಾಲೋ ಮಾಡಿ
Comments

ನವದೆಹಲಿ: ‘ಆಹಾರ ಪರೀಕ್ಷೆಗಾಗಿ 100 ಪ್ರಯೋಗಾಲಯ ಮತ್ತು 50 ವಿಕಿರಣ ಕೇಂದ್ರಗಳನ್ನು ಸ್ಥಾಪಿಸಲಾಗುವುದು’ ಎಂದು ಕೇಂದ್ರ ಆಹಾರ ಸಂಸ್ಕರಣಾ ಸಚಿವ ಚಿರಾಗ್ ಪಾಸ್ವಾನ್ ತಿಳಿಸಿದ್ದಾರೆ.

ಗುರುವಾರ ‘ವಿಶ್ವ ಆಹಾರ ಭಾರತ’ದ ಮೂರನೇ ಆವೃತ್ತಿಗೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಆಹಾರ ಸಂಸ್ಕರಣೆಯ ಗುಣಮಟ್ಟ ಹೆಚ್ಚಿಸುವ ಮೂಲಕ ವ್ಯರ್ಥವಾಗುವ ಪದಾರ್ಥಗಳ ಪ್ರಮಾಣವನ್ನು ಕಡಿಮೆ ಮಾಡುವ ಅಗತ್ಯವಿದೆ. ಆಹಾರ ಸಂಸ್ಕರಣಾ ವಲಯವು ರೈತರ ಆದಾಯ ಹೆಚ್ಚಿಸುವ ಜೊತೆಗೆ ಉದ್ಯೋಗಾವಕಾಶ ಸೃಷ್ಟಿಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂದು ಹೇಳಿದರು.

ಇದೇ 22ರ ವರೆಗೆ ನಡೆಯಲಿರುವ ಈ ಕಾರ್ಯಕ್ರಮದಲ್ಲಿ 90ಕ್ಕೂ ಹೆಚ್ಚು ದೇಶಗಳು ಪಾಲ್ಗೊಳ್ಳಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT