ನವದೆಹಲಿ: ವೊಡಾಫೋನ್ ಐಡಿಯಾ ಕಂಪನಿಯನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಯಾವುದೇ ಪ್ರಸ್ತಾವವು ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು, ಬುಧವಾರ ಲೋಕಸಭೆಗೆ ತಿಳಿಸಿದೆ.

ಕಂಪನಿಯು ಸಾಲದ ಸುಳಿಗೆ ಸಿಲುಕಿದ್ದು, ಕೇಂದ್ರಕ್ಕೆ ₹16 ಸಾವಿರ ಕೋಟಿ ಬಡ್ಡಿ ಪಾವತಿಸಬೇಕಿದೆ. ಹಾಗಾಗಿ, ಕಂಪನಿಯ ಸ್ವಾಧೀನಕ್ಕೆ ಸರ್ಕಾರ ನಿರ್ಧರಿಸಿದೆಯೇ ಎಂಬ ಪ್ರಶ್ನೆಗೆ, ಕೇಂದ್ರ ಸಂವಹನ ಖಾತೆಯ ರಾಜ್ಯ ಸಚಿವ ದೇವುಸಿಂಹ ಚೌಹಾಣ್ ಅವರು, ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ.

ಕಂಪನಿಯನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಂವಹನ ಸಚಿವಾಲಯವು ಯಾವುದೇ ಪ್ರಸ್ತಾವವನ್ನು ಪರಿಗಣಿಸಿಲ್ಲ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.