ನವದೆಹಲಿ: ಪ್ರಾದೇಶಿಕ ಸಂಪರ್ಕ ಯೋಜನೆ (ಉಡಾನ್) ಅನ್ನು ಇನ್ನೂ 10 ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಸೋಮವಾರ ಹೇಳಿದ್ದಾರೆ.

ಈ ಯೋಜನೆಯು ಪ್ರಾದೇಶಿಕ ವಿಮಾನಯಾನ ಸಂಸ್ಥೆಗಳ ಹುಟ್ಟು ಮತ್ತು ಬೆಳವಣಿಗೆಗೆ ಕಾರಣವಾಗಿದೆ. ಇದು ಉದ್ಯೋಗ ಸೃಷ್ಟಿ ಮತ್ತು ಪ್ರವಾಸೋದ್ಯಮಕ್ಕೆ ಉತ್ತಮ ಕೊಡುಗೆ ನೀಡಿದೆ ಎಂದು ಉಡಾನ್ ಯೋಜನೆಗೆ 8 ವರ್ಷ ಪೂರ್ಣಗೊಂಡ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

601 ಮಾರ್ಗಗಳು ಮತ್ತು 71 ವಿಮಾನ ನಿಲ್ದಾಣಗಳು ಈ ಯೋಜನೆಯಡಿ ಕಾರ್ಯನಿರ್ವಹಿಸುತ್ತಿವೆ.

ದೇಶದ ವಿವಿಧ ಪ್ರದೇಶಕ್ಕೆ ವಿಮಾನ ಸಂಪರ್ಕ ಕಲ್ಪಿಸಲು ಮತ್ತು ಕೈಗೆಟುಕುವ ದರದಲ್ಲಿ ವಿಮಾನ ಪ್ರಯಾಣ ಸೇವೆ ಒದಗಿಸಲು 2016ರ ಅಕ್ಟೋಬರ್ 21ರಂದು ಉಡಾನ್ ಆರಂಭಿಸಲಾಯಿತು. ಇದೀಗ ಈ ಯೋಜನೆಯನ್ನು ಇನ್ನೂ 10 ವರ್ಷಗಳವರೆಗೆ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.

71 ವಿಮಾನ ನಿಲ್ದಾಣಗಳು, 13 ಹೆಲಿಪೋರ್ಟ್ಸ್ ಮತ್ತು 2 ವಾಟರ್ ಏರೋಡ್ರೋಮ್ಸ್ ಇದ್ದು, 1.44 ಕೋಟಿಗೂ ಅಧಿಕ ಜನ ಪ್ರಯಾಣಿಸುತ್ತಿದ್ದಾರೆ. 2014ರಲ್ಲಿ ದೇಶದಲ್ಲಿ 74 ಕಾರ್ಯಾಚರಣೆಯ ವಿಮಾನ ನಿಲ್ದಾಣಗಳಿದ್ದವು. ಅದು 2024ರ ವೇಳೆಗೆ 157ಕ್ಕೆ ಏರಿಕೆಯಾಗಿದೆ. 2047ರ ವೇಳೆಗೆ 350–400ಕ್ಕೆ ಹೆಚ್ಚಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.