ನವದೆಹಲಿ: ‘ದೇಶದಲ್ಲಿ ಹಣದುಬ್ಬರ ನಿಯಂತ್ರಣದಲ್ಲಿದೆ. ಹಾಗಾಗಿ, ಮುಂಬರುವ ತಿಂಗಳುಗಳಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಕಡಿತಗೊಳಿಸುವ ಸಾಧ್ಯತೆಯಿದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ದೇಶದ ಆರ್ಥಿಕ ಸ್ಥಿತಿಯು ಸದೃಢವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ದೇಶದ ಸರಾಸರಿ ಹಣದುಬ್ಬರವು ಶೇ 5ರಿಂದ ಶೇ 5.5ರಷ್ಟಿದೆ’ ಎಂದು ಹೇಳಿದ್ದಾರೆ.

‘ಕಳೆದ ಒಂದೂವರೆ ವರ್ಷದ ಹಿಂದೆ ಜಾಗತಿಕ ಮಟ್ಟದಲ್ಲಿ ತಲೆದೋರಿದ ಉಕ್ರೇನ್ ಬಿಕ್ಕಟ್ಟಿನಿಂದಾಗಿ ಬಡ್ಡಿದರವನ್ನು ಹೆಚ್ಚಿಸಲಾಗಿತ್ತು. ಆರ್‌ಬಿಐನ ಮುಂದಿನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯ ವೇಳೆಗೆ ಇಳಿಕೆಯಾಗುವ ನಿರೀಕ್ಷೆಯಿದೆ’ ಎಂದಿದ್ದಾರೆ.

ಭಾರತೀಯ ರಿಸರ್ವ್ ಬ್ಯಾಂಕ್, 2023ರ ಫೆಬ್ರುವರಿಯಿಂದಲೂ ರೆಪೊ ದರವನ್ನು ಶೇ 6.5ರಲ್ಲಿಯೇ ಯಥಾಸ್ಥಿತಿ ಕಾಯ್ದುಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.