ನವದೆಹಲಿ: ಜಿಎಸ್‌ಟಿ ನಿಯಮಗಳು ಮತ್ತು ರಿಟರ್ನ್ಸ್ ಸಲ್ಲಿಕೆಯನ್ನು ಇನ್ನಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ವರ್ತಕರು, ಲೆಕ್ಕಪತ್ರ ಪರಿಶೋಧಕರೊಂದಿಗೆ ಸಭೆ ನಡೆಸಿದ್ದಾರೆ.

ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವಾಗ ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತರಲಾಯಿತು.

‘ರಿಟರ್ನ್ಸ್ ಸಲ್ಲಿಕೆಯ ಸರಳೀಕೃತ ವ್ಯವಸ್ಥೆಯು ಶೀಘ್ರವೇ ಜಾರಿಗೊಳಿಸುವುದಾಗಿ ನಿರ್ಮಲಾ ಅವರು ಭರವಸೆ ನೀಡಿದ್ದಾರೆ’ ಎಂದು ರೆವಿನ್ಯೂ ಕಾರ್ಯದರ್ಶಿ ಅಜಯ್ ಭೂಷಣ್ ಪಾಂಡೆ ಸಭೆಯ ಬಳಿಕ ತಿಳಿಸಿದ್ದಾರೆ.

ಜಿಎಸ್‌ಟಿಎನ್ ಮತ್ತು ಸಿಬಿಐಸಿ ಡಿಸೆಂಬರ್ 7ರಿಂದ ದೇಶದೆಲ್ಲೆಡೆ ಜಿಎಸ್‌ಟಿ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಸಂವಾದ, ಚರ್ಚೆ ನಡೆಸಲಿದೆ ಎಂದೂ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.