ನವದೆಹಲಿ: ಐ.ಟಿ. ಸೇವಾ ವಲಯದ ಪ್ರಮುಖ ಕಂಪನಿಯಾದ ಎಚ್‌ಸಿಎಲ್ ಟೆಕ್ನಾಲಜೀಸ್, ತನ್ನ ಕೆಲವು ಕೆಲಸಗಳನ್ನು ಬೇರೆ ಬೇರೆ ದೇಶಗಳಲ್ಲಿನ ತನ್ನ ನೌಕರರಿಗೆ ಹಂಚಿಕೆ ಮಾಡುವ ಉದ್ದೇಶ ಹೊಂದಿದೆ. ಭಾರತದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವುದು ಇದಕ್ಕೆ ಮುಖ್ಯ ಕಾರಣ.

ಮುಖ್ಯವಾದ ಕೆಲಸಗಳು ಯಾವುವು ಎಂಬ ಪಟ್ಟಿಯನ್ನು ಸಿದ್ಧಪಡಿಸಲು ಕಂಪನಿಯು ತನ್ನ ಗ್ರಾಹಕರ ಜೊತೆ ಮಾತುಕತೆಯಲ್ಲಿ ತೊಡಗಿದೆ ಎಂದು ಎಚ್‌ಸಿಎಲ್ ಟೆಕ್ನಾಲಜೀಸ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಸಿ. ವಿಜಯಕುಮಾರ್ ತಿಳಿಸಿದ್ದಾರೆ.

‘ನಾವು ಜಾಗತಿಕ ಮಟ್ಟದಲ್ಲಿ ಅಸ್ತಿತ್ವ ಹೊಂದಿದ್ದೇವೆ. ನಮ್ಮ ಶೇಕಡ 30ರಷ್ಟು ನೌಕರರು ಭಾರತದಿಂದ ಹೊರಗಡೆ ಇದ್ದು ಕೆಲಸ ಮಾಡುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಕೋವಿಡ್–19 ನಿಯಂತ್ರಣಕ್ಕೆ ಬಂದಿದೆ, ಅಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಜೋರಾಗಿ ನಡೆದಿದೆ. ಹಾಗಾಗಿ, ಅಂತಹ ಸ್ಥಳಗಳಲ್ಲಿ ಹೆಚ್ಚು ಕೆಲಸ ಮಾಡಲು ಸಾಧ್ಯವಾಗುತ್ತಿದೆ. ನಮ್ಮ ಗ್ರಾಹಕರು ಹಾಗೂ ನೌಕರರು ಪರಿಸ್ಥಿತಿಯನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳುತ್ತಿದ್ದಾರೆ’ ಎಂದು ವಿಜಯಕುಮಾರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.