ನವದೆಹಲಿ: ದಕ್ಷಿಣ ಕೊರಿಯಾದ ಹುಂಡೈ ಕಂಪನಿಯು ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ₹25 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಲು ನಿರ್ಧರಿಸಿದೆ ಎಂದು ಸೋಮವಾರ ಮೂಲಗಳು ತಿಳಿಸಿವೆ.

ಭಾರತದಲ್ಲಿ ಮಾರುತಿ ಸುಜುಕಿ ಕಂಪನಿಯ ಬಳಿಕ ಹುಂಡೈ ಅತಿದೊಡ್ಡ ಕಾರು ತಯಾರಿಕಾ ಕಂಪನಿ ಆಗಿದೆ. ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಷೇರುಪೇಟೆ ಹಾಗೂ ಮುಂಬೈ ಷೇರುಪೇಟೆಯಲ್ಲಿ ವಹಿವಾಟು ಆರಂಭಿಸಲು ಸಿದ್ಧತೆ ನಡೆಸಿದೆ. ಶೇ 15ರಿಂದ 20ರಷ್ಟು ಷೇರುಗಳನ್ನು ಮಾರಾಟ ಮಾಡುವ ಮೂಲಕ ₹25 ಸಾವಿರ ಕೋಟಿಯಿಂದ ₹46,500 ಕೋಟಿವರೆಗೆ ಬಂಡವಾಳ ಸಂಗ್ರಹಿಸಲು ನಿರ್ಧರಿಸಿದೆ ಎಂದು ತಿಳಿಸಿವೆ.

ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಸಂಗ್ರಹಿಸಿದ ₹21 ಸಾವಿರ ಕೋಟಿಯು ದೇಶದಲ್ಲಿನ ಅತಿದೊಡ್ಡ ಐಪಿಒ ಮೊತ್ತವಾಗಿದೆ. ಇದಕ್ಕಿಂತಲೂ ಹುಂಡೈ ಐಪಿಒ ಅತಿದೊಡ್ಡದಾಗಿದೆ. ಈ ಕುರಿತು ಕಂಪನಿಯು ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಪಿಟಿಐ ಸುದ್ದಿಸಂಸ್ಥೆ ತಿಳಿಸಿದೆ.

ಹುಂಡೈ ಮೋಟರ್ಸ್ ಇಂಡಿಯಾ ಲಿಮಿಟೆಡ್ (ಎಚ್‌ಎಂಐಎಲ್) ಭಾರತದಲ್ಲಿ 1996ರಿಂದ ತನ್ನ ಕಾರ್ಯಾಚರಣೆ ಆರಂಭಿಸಿದ್ದು, 13 ಮಾದರಿಯ ವಾಹನಗಳನ್ನು ಮಾರಾಟ ಮಾಡುತ್ತಿದೆ. 1,366 ಕಾರುಗಳ ಮಾರಾಟ ಕೇಂದ್ರಗಳಿದ್ದು, 1,549 ಸೇವಾ ಕೇಂದ್ರಗಳನ್ನು ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.