ನವದೆಹಲಿ: ಹುಂಡೈ ಮೋಟರ್ ಇಂಡಿಯಾ ಕಂಪನಿಯು ಜನವರಿಯಿಂದ ತನ್ನೆಲ್ಲಾ ಮಾದರಿಗಳ ಬೆಲೆ ಹೆಚ್ಚಳ ಮಾಡುವುದಾಗಿ ಗುರುವಾರ ಹೇಳಿದೆ.

ತಯಾರಿಕಾ ವೆಚ್ಚದಲ್ಲಿ ಆಗುತ್ತಿರುವ ವೆಚ್ಚವನ್ನು ಸದ್ಯ ಕಂಪನಿಯೇ ಭರಿಸುತ್ತಿದೆ. ಆದರೆ, ಜನವರಿಯಿಂದ ತಯಾರಿಕಾ ವೆಚ್ಚದಲ್ಲಿ ಒಂದಷ್ಟು ಭಾಗವನ್ನು ಬೆಲೆ ಏರಿಕೆ ಮೂಲಕ ಗ್ರಾಹಕರಿಗೆ ವರ್ಗಾಯಿಸಲು ನಿರ್ಧರಿಸಲಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಲೆ ಏರಿಕೆ ಪ್ರಮಾಣ ಎಷ್ಟಿರಲಿದೆ ಎನ್ನುವುದನ್ನು ಕಂಪನಿ ತಿಳಿಸಿಲ್ಲ. ಆದರೆ, ಗ್ರಾಹಕರಿಗೆ ಹೆಚ್ಚಿನ ಹೊರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದಷ್ಟೇ ಹೇಳಿದೆ.

ಮಾರುತಿ ಸುಜುಕಿ ಇಂಡಿಯಾ, ಟಾಟಾ ಮೋಟರ್ಸ್, ಮರ್ಸಿಡಿಸ್ ಬೆಂಜ್, ಔಡಿ, ರೆನೊ, ಕಿಯಾ ಇಂಡಿಯಾ ಮತ್ತು ಎಂಜಿ ಮೋಟರ್ ಕಂಪನಿಗಳು ಸಹ ಜನವರಿಯಿಂದ ವಾಹನಗಳ ಬೆಲೆ ಏರಿಕೆ ಮಾಡುವುದಾಗಿ ಈಗಾಗಲೇ ಘೋಷಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.