ನವದೆಹಲಿ: ಆದಾಯ ತೆರಿಗೆ ಕಾಯ್ದೆ ಪರಾಮರ್ಶೆಗೆ ಸಂಬಂಧಿಸಿದಂತೆ ಕಳೆದ ಒಂದು ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆಯು ಖಾಸಗಿ ವಲಯ ಮತ್ತು ತೆರಿಗೆ ಪರಿಣತರಿಂದ (ಷೇರುದಾರರು) 6,500 ಸಲಹೆಗಳನ್ನು ಸ್ವೀಕರಿಸಿದೆ.

ಆರು ದಶಕದಷ್ಟು ಹಳೆಯದಾದ ಆದಾಯ ತೆರಿಗೆ ಕಾಯ್ದೆ 1961ರ ಸಮಗ್ರ ಪರಿಶೀಲನೆ ಬಗ್ಗೆ 2024–25ನೇ ಸಾಲಿನ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿತ್ತು. ಹೀಗಾಗಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಯಿತು.

ಆದಾಯ ತೆರಿಗೆ (ಐ.ಟಿ) ಕಾಯ್ದೆಯ ವಿವಿಧ ಅಂಶಗಳನ್ನು ಪರಿಶೀಲಿಸಲು 22 ವಿಶೇಷ ಉಪಸಮಿತಿಗಳನ್ನು ರಚಿಸಲಾಗಿದೆ. ಕಳೆದ ತಿಂಗಳು ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ್ದು, ಪೋರ್ಟಲ್ ಮೂಲಕ 6,500 ಸಲಹೆಗಳನ್ನು ಸ್ವೀಕರಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಕಳೆದ ತಿಂಗಳು ಕೇಂದ್ರ ನೇರ ತೆರಿಗೆಗಳ ಮಂಡಳಿಯು ಕಾಯ್ದೆಯ ಸಮಗ್ರ ಪರಾಮರ್ಶೆಗೆ ಸಂಬಂಧಿಸಿದಂತೆ ಆಂತರಿಕ ಸಮಿತಿಯನ್ನು ರಚಿಸಿತ್ತು. ಸರಳ ಭಾಷೆಯಲ್ಲಿ ತೆರಿಗೆದಾರರಿಗೆ ಅರ್ಥವಾಗುವಂತೆ ಕಾಯ್ದೆ ರೂಪಿಸಲು ಸರ್ಕಾರ ಮುಂದಾಗಿದೆ. ವಿವಿಧ ವರ್ಗದ ಜನರಿಂದ ಸಲಹೆ ಸ್ವೀಕರಿಸುವ ಸಂಬಂಧ ಪೋರ್ಟಲ್ ರೂಪಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.