ನವದೆಹಲಿ: ಕೋವಿಡ್-19 ಹರಡುವಿಕೆ ನಿಯಂತ್ರಿಸಲು ರಾಜ್ಯಗಳು ಹೇರುತ್ತಿರುವ ನಿರ್ಬಂಧಗಳು ರಫ್ತು ವಹಿವಾಟಿನ ಮೇಲೆ ಪರಿಣಾಮ ಬೀರಬಹುದು ಎಂದು ಎಂಜಿನಿಯರಿಂಗ್ ರಫ್ತು ಉತ್ತೇಜನಾ ಮಂಡಳಿ (ಇಇಪಿಸಿ) ಹೇಳಿದೆ.

‘ಅದರಲ್ಲಿಯೂ, ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳಿಗೆ (ಎಂಎಸ್‌ಎಂಇ) ಹೆಚ್ಚು ಹಾನಿ ಆಗುವ ಸಾಧ್ಯತೆ ಇದೆ’ ಎಂದು ಮಂಡಳಿಯು ಅಂದಾಜು ಮಾಡಿದೆ.

ಹಣಕಾಸು ವರ್ಷದ ಕಳೆದ ಕೆಲವು ತಿಂಗಳುಗಳಲ್ಲಿ ಕಂಡ ಚೇತರಿಕೆಯು ಈ ವಲಯಕ್ಕೆ ಭರವಸೆ ನೀಡಿತ್ತು. ಇಂತಹ ಸಂದರ್ಭದಲ್ಲಿ ಕೋವಿಡ್–19 ಪ್ರಕರಣಗಳು ಹೆಚ್ಚಾಗುತ್ತಿರುವುದು ಮತ್ತೆ ಅಪಾಯ ತಂದೊಡ್ಡಿದೆ ಎಂದು ಅದು ಹೇಳಿದೆ.

ಸಾಂಕ್ರಾಮಿಕದ ಪರಿಣಾಮವನ್ನು ಕಡಿಮೆ ಮಾಡಲು ಸರ್ಕಾರವು ಲಸಿಕೆ ನೀಡುವುದನ್ನು ಚುರುಕುಗೊಳಿಸುವ ಅಗತ್ಯವಿದೆ ಎಂದು ಅದು ಅಭಿಪ್ರಾಯಪಟ್ಟಿದೆ.

ಜಾಗತಿಕ ಬೇಡಿಕೆ ಹೆಚ್ಚಳ ಮತ್ತು ಆರ್ಥಿಕ ಚಟುವಟಿಕೆಗಳ ಚೇತರಿಕೆಯಿಂದಾಗಿ ಎಂಜಿನಿಯರಿಂಗ್ ಸರಕುಗಳ33 ವಿಭಾಗಗಳಲ್ಲಿ 32 ವಿಭಾಗಗಳು ಮಾರ್ಚ್‌ನಲ್ಲಿ ಸಕಾರಾತ್ಮಕ ಬೆಳವಣಿಗೆ ಕಂಡಿವೆ. ಸಾಂಕ್ರಾಮಿಕದಿಂದಾಗಿ ಕಳೆದ ಒಂದು ವರ್ಷದಿಂದ ನಷ್ಟದಲ್ಲಿ ಸಿಲುಕಿರುವ ರಫ್ತುದಾರರಿಗೆ ಒಳ್ಳೆಯ ಕಾಲ ಶುರುವಾಗಿರುವುದನ್ನು ಇದು ಸೂಚಿಸುತ್ತಿದೆ ಎಂದು ತಿಳಿಸಿದೆ.

ಎಂಜಿನಿಯರಿಂಗ್ ಸರಕುಗಳ ರಫ್ತಿಗೆ ಅಮೆರಿಕವು ಪ್ರಮುಖ ಮಾರುಕಟ್ಟೆಯಾಗಿದೆ. ಚೀನಾ ಮತ್ತು ಯುಎಇ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.