ನವದೆಹಲಿ: ಜಾಗತಿಕ ಆರ್ಥಿಕತೆಯು ಮಂದಗತಿಯಲ್ಲಿದ್ದರೂ ಭಾರತದ ಆರ್ಥಿಕತೆ ಬೆಳವಣಿಗೆಗೆ ಯಾವುದೇ ಅಡ್ಡಿಯಾಗುವುದಿಲ್ಲ. 2024–25ನೇ ಆರ್ಥಿಕ ವರ್ಷದಲ್ಲಿ ಜಿಡಿಪಿಯು ಶೇ 7ರಷ್ಟು ಪ್ರಗತಿ ಕಾಣಲಿದೆ ಎಂದು ಡೆಲಾಯ್ಟ್‌ನ ದಕ್ಷಿಣ ಏಷ್ಯಾ ಸಿಇಒ ರೋಮಲ್ ಶೆಟ್ಟಿ ತಿಳಿಸಿದ್ದಾರೆ.

ದೇಶದಲ್ಲಿ ಚಿಲ್ಲರೆ ಹಣದುಬ್ಬರವು ನಿಯಂತ್ರಣದಲ್ಲಿದೆ. ಗ್ರಾಮೀಣ ಪ್ರದೇಶದಲ್ಲಿ ಬೇಡಿಕೆ ಹೆಚ್ಚಿದೆ. ವಾಹನಗಳ ಮಾರಾಟದಲ್ಲೂ ಸುಧಾರಣೆ ಕಂಡುಬಂದಿದೆ ಎಂದು ಪಿಟಿಐಗೆ ನೀಡಿರುವ ಸಂದರ್ಶನದಲ್ಲಿ ಅವರು ತಿಳಿಸಿದ್ದಾರೆ.

ಜಾಗತಿಕ ಅಡೆತಡೆ ನಡುವೆಯೂ ಆರ್ಥಿಕತೆ ಬೆಳವಣಿಗೆಯಲ್ಲಿ ಭಾರತದ ಸ್ಥಾನ ಉತ್ತಮವಾಗಿದೆ. ಆದರೆ, ಮಧ್ಯಪ್ರಾಚ್ಯ ಮತ್ತು ಉಕ್ರೇನ್ ಬಿಕ್ಕಟ್ಟು ಸೇರಿ ಪಶ್ಚಿಮ ಯುರೋಪ್, ಉತ್ತರ ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿನ ಮಂದಗತಿಯ ಆರ್ಥಿಕತೆ ಬೆಳವಣಿಗೆಯು ಜಿಡಿಪಿ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

2025–26ನೇ ಆರ್ಥಿಕ ವರ್ಷದಲ್ಲಿ ಭಾರತದ ಜಿಡಿಪಿಯು ಶೇ 6.7ರಷ್ಟು ಪ್ರಗತಿ ಕಾಣಲಿದೆ ಎಂದು ಡೆಲಾಯ್ಟ್ ಅಂದಾಜಿಸಿದೆ. 2023–24ರಲ್ಲಿ ಜಿಡಿಪಿಯು ಶೇ 8.2ರಷ್ಟು ದಾಖಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕ ಸುಧಾರಣೆಗಳಿಗೆ ಒತ್ತು ನೀಡಿದೆ. ಸದ್ಯ ಭಾರತವು ಜಾಗತಿಕ ಮಟ್ಟದಲ್ಲಿ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. 2030ರೊಳಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.