ಮುಂಬೈ: ‘ದೇಶದ ಆರ್ಥಿಕತೆ ಬೆಳವಣಿಗೆಗೆ ಉತ್ತೇಜನ ನೀಡಲು ಭಾರತೀಯ ರಿಸರ್ವ್ ಬ್ಯಾಂಕ್ ರೆಪೊ ದರ ಕಡಿತಕ್ಕೆ ಮುಂದಾಗಬೇಕಿದೆ’ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಒತ್ತಾಯಿಸಿದ್ದಾರೆ.

ದೇಶದ ಹಣದುಬ್ಬರದ ಗುರಿ ಮತ್ತು ರೆಪೊ ದರ ನಿಗದಿಗೆ ಸಂಬಂಧಿಸಿದಂತೆ ಆರ್ಬಿಐ ರೂಪಿಸಿರುವ ಚೌಕಟ್ಟಿನ ಬಗ್ಗೆ ಪರಾಮರ್ಶೆ ನಡೆಸುವಂತೆ ಕೇಂದ್ರ ಸಚಿವರೊಬ್ಬರು ಹೇಳಿಕೆ ನೀಡಿರುವುದು ಇದೇ ಮೊದಲು.

ಗುರುವಾರ ಖಾಸಗಿ ವಾಹಿನಿಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಆರ್ಥಿಕತೆ ಬೆಳವಣಿಗೆಗೆ ಉತ್ತೇಜನ ನೀಡುವ ಅಗತ್ಯವಿದೆ. ಹಾಗಾಗಿ, ಆರ್ಬಿಐ ರೆಪೊ ದರ ಕಡಿತಗೊಳಿಸಲಿದೆ ಎಂಬ ಭರವಸೆ ನನಗಿದೆ’ ಎಂದರು.

ರೆಪೊ ದರ ಕಡಿತದ ಬಗ್ಗೆ ನಿರ್ಧಾರ ಕೈಗೊಳ್ಳುವಾಗ ಆಹಾರ ಹಣದುಬ್ಬರದ ಸ್ಥಿತಿಗತಿ ಅವಲೋಕಿಸುವುದು ಸಂಪೂರ್ಣ ದೋಷಪೂರಿತ ಸಿದ್ಧಾಂತವಾಗಿದೆ ಎಂದು ಅಭಿಪ್ರಾಯಪಟ್ಟರು.

‘ಬಡ್ಡಿದರ ಕಡಿತಗೊಳಿಸಬೇಕು ಎಂಬುದು ಕೇಂದ್ರ ಸರ್ಕಾರದ ಒತ್ತಾಯವಲ್ಲ. ನನ್ನ ವೈಯಕ್ತಿಕ ಸಲಹೆಯಾಗಿದೆ. ಆರ್ಥಿಕ ಸಮೀಕ್ಷೆಯ ಬಿಡುಗಡೆ ವೇಳೆ ಮುಖ್ಯ ಆರ್ಥಿಕ ಸಲಹೆಗಾರರು ಕೂಡ ಇದೇ ಅಭಿಪ್ರಾಯ ಮಂಡಿಸಿದ್ದರು’ ಎಂದರು.

ಆಹಾರ ಪದಾರ್ಥಗಳ ಬೆಲೆಯನ್ನು ಹೊರಗಿಟ್ಟು ಹಣದುಬ್ಬರವನ್ನು ನಿರ್ಧರಿಸಬೇಕಿದೆ ಎಂದು 2023–24ನೇ ಸಾಲಿನ ಆರ್ಥಿಕ ಸಮೀಕ್ಷೆಯಲ್ಲಿಯೂ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.