ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಜೂನ್ 7ಕ್ಕೆ ಮುಕ್ತಾಯವಾದ ವಾರದಲ್ಲಿ ಏರಿಕೆಯಾಗಿದೆ.

ಕೊನೆಗೊಂಡ ವಾರದಲ್ಲಿ ₹35,979 ಕೋಟಿ ಹೆಚ್ಚಳವಾಗಿದೆ. ಒಟ್ಟು ಮೀಸಲು ಸಂಗ್ರಹವು ₹54.78 ಲಕ್ಷ ಕೋಟಿ ಆಗಿದ್ದು, ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಶುಕ್ರವಾರ ತಿಳಿಸಿದೆ.

ವಿದೇಶಿ ಕರೆನ್ಸಿಗಳ ಸಂಗ್ರಹವು ₹31,516 ಕೋಟಿ ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹ ಮೊತ್ತ ₹48.14 ಲಕ್ಷ ಕೋಟಿ ಆಗಿದೆ.

ಚಿನ್ನದ ಮೀಸಲು ಸಂಗ್ರಹವು ₹4,017 ಕೋಟಿ ಏರಿಕೆಯಾಗಿದ್ದು, ಒಟ್ಟು ಸಂಗ್ರಹ ₹4.75 ಲಕ್ಷ ಕೋಟಿಗೆ ತಲುಪಿದೆ.

ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್) ಭಾರತದ ಮೀಸಲು ಸಂಗ್ರಹವು ₹83 ಕೋಟಿ ಹೆಚ್ಚಳವಾಗಿದ್ದು, ಒಟ್ಟು ಸಂಗ್ರಹ ಮೊತ್ತ ₹36,223 ಕೋಟಿ ಆಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.