ನವದೆಹಲಿ: ಫೆಬ್ರುವರಿ ತಿಂಗಳಿನಲ್ಲಿ ದೇಶದ ತಯಾರಿಕಾ ವಲಯದ ಬೆಳವಣಿಗೆಯು ಐದು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

ಉತ್ಪಾದನೆ ಮತ್ತು ಮಾರಾಟದಲ್ಲಿ ಹೆಚ್ಚಳ ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ವೃದ್ಧಿಸಿರುವುದರಿಂದ ಈ ಉತ್ತಮ ಬೆಳವಣಿಗೆ ಸಾಧ್ಯವಾಗಿದೆ ಎಂದು ಎಸ್ ಆ್ಯಂಡ್ ಪಿ ಗ್ಲೋಬಲ್ ಸಂಸ್ಥೆ ತಿಳಿಸಿದೆ.

ಮ್ಯಾನುಫ್ಯಾಕ್ಚರಿಂಗ್ ಪರ್ಚೇಸಿಂಗ್ ಮ್ಯಾನೇಜರ್ಸ್ ಸೂಚ್ಯಂಕದ (ಪಿಎಂಐ) ವರದಿ ಪ್ರಕಾರ ಜನವರಿಯಲ್ಲಿ 56.5ರಷ್ಟಿದ್ದ ಸೂಚ್ಯಂಕವು, ಫೆಬ್ರುವರಿಯಲ್ಲಿ 56.9ಕ್ಕೆ ಏರಿಕೆಯಾಗಿದೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಿಂದ ಆರೋಗ್ಯ ವಲಯದಲ್ಲಿ ಸಾಕಷ್ಟು ಸುಧಾರಣೆಯಾಗಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಕಳೆದ ಐದು ತಿಂಗಳ ಅವಧಿಯಲ್ಲಿ ಉತ್ಪಾದನಾ ಚಟುವಟಿಕೆಗಳು ಕ್ಷಿಪ್ರಗತಿಯಲ್ಲಿ ಏರಿಕೆ ಕಂಡಿವೆ. ಇದಕ್ಕೆ ಪೂರಕವಾಗಿ ಮಾರಾಟವೂ ವಿಸ್ತರಣೆಯಾಗಿದೆ. ಹೊಸ ರಫ್ತು ಆರ್ಡರ್‌ಗಳ ವಿಸ್ತರಣೆಯೂ ಹೆಚ್ಚಾಗಿದೆ ಎಂದು ವಿವರಿಸಿದೆ.

ಭಾರತದಲ್ಲಿ ತಯಾರಾಗುವ ಉತ್ಪನ್ನಗಳಿಗೆ ಆಸ್ಟೇಲಿಯಾ, ಬಾಂಗ್ಲಾದೇಶ, ಬ್ರೆಜಿಲ್, ಕೆನಡಾ, ಇಂಡೊನೇಷ್ಯಾ, ಅಮೆರಿಕ, ಯುಎಇಯಲ್ಲಿ ಬೇಡಿಕೆ ಹೆಚ್ಚಿದೆ. ಹಾಗಾಗಿ, ಈ ದೇಶಗಳಿಂದ ಹೊಸ ರಫ್ತು ಆರ್ಡರ್‌ಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ತಿಳಿಸಿದೆ.

‘ದೇಶೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗಣನೀಯ ಪ್ರಮಾಣದಲ್ಲಿ ಬೇಡಿಕೆ ಹೆಚ್ಚುತ್ತಿರುವುದರಿಂದ ಉತ್ಪಾದನಾ ಚಟುವಟಿಕೆಗಳು ಮುಂದುವರಿಯಲಿವೆ’ ಎಂದು ಎಚ್‌ಎಸ್‌ಬಿಸಿ ಅರ್ಥಶಾಸ್ತ್ರಜ್ಞರಾದ ಇನೆಸ್ ಲ್ಯಾಮ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.