ನವದೆಹಲಿ: ಅಕ್ಟೋಬರ್ ತಿಂಗಳಿನಲ್ಲಿ ರಫ್ತಿಗಿಂತಲೂ ಆಮದು ಪ್ರಮಾಣ ಹೆಚ್ಚಾಗಿದ್ದು, ವಿದೇಶಿ ವ್ಯಾಪಾರದ ಕೊರತೆಯು ₹2.29 ಲಕ್ಷ ಕೋಟಿ ಆಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.

ರಫ್ತುವಿನ ಮೌಲ್ಯಕ್ಕಿಂತ ಆಮದು ಮೌಲ್ಯವೇ ಹೆಚ್ಚು ಇದ್ದರೆ, ಈ ಅಂತರವನ್ನು ವ್ಯಾಪಾರ ಕೊರತೆ ಎನ್ನಲಾಗುತ್ತದೆ.

ರಫ್ತು ಪ್ರಮಾಣದಲ್ಲಿ ಶೇ 17.25ರಷ್ಟು ಏರಿಕೆಯಾಗಿದೆ. ಒಟ್ಟು ₹3.31 ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ರಫ್ತು ಮಾಡಲಾಗಿದೆ. ಇದು ಕಳೆದ ಒಂದು ದಶಕದಲ್ಲಿ ತಿಂಗಳೊಂದರಲ್ಲಿ ಆಗಿರುವ ಅತಿಹೆಚ್ಚು ರಫ್ತು ಪ್ರಮಾಣವಾಗಿದೆ ಎಂದು ಕೇಂದ್ರ ವಿವರಿಸಿದೆ.

ಆದರೆ, ಆಮದು ಪ್ರಮಾಣವು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 3.9ರಷ್ಟು ಹೆಚ್ಚಳವಾಗಿದೆ. ಒಟ್ಟು ₹5.60 ಲಕ್ಷ ಕೋಟಿ ಮೌಲ್ಯದ ಸರಕುಗಳನ್ನು ಆಮದು ಮಾಡಿಕೊಳ್ಳಲಾಗಿದೆ ಎಂದು ಹೇಳಿದೆ.

‘ಅಕ್ಟೋಬರ್ನಲ್ಲಿ ರಫ್ತು ಪ್ರಮಾಣ ಹೆಚ್ಚಾಗಿದ್ದು, ಇದೇ ಸ್ಥಿತಿ ಮುಂದುವರಿಯಲಿದೆ. ಈ ವರ್ಷದಲ್ಲಿ ದೇಶದ ರಫ್ತು ಮೌಲ್ಯವು ₹67.56 ಲಕ್ಷ ಕೋಟಿ ದಾಟುವ ನಿರೀಕ್ಷೆಯಿದೆ’ ಎಂದು ಕೇಂದ್ರ ವಾಣಿಜ್ಯ ಸಚಿವಾಲಯದ ಕಾರ್ಯದರ್ಶಿ ಸುನಿಲ್ ಬರ್ತ್ವಾಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.