ನವದೆಹಲಿ: ಸರ್ವರ್ನಲ್ಲಿ ಕಾಣಿಸಿಕೊಂಡಿದ್ದ ತಾಂತ್ರಿಕ ದೋಷವನ್ನು ಸರಿಪಡಿಸಲಾಗಿದ್ದು, ವಿಮಾನ ಸೇವೆಯು ಭಾನುವಾರ ಸಹಜ ಸ್ಥಿತಿಗೆ ಮರಳಿದೆ ಎಂದು ಇಂಡಿಗೊ ಕಂಪನಿ ತಿಳಿಸಿದೆ.

ತಾಂತ್ರಿಕ ದೋಷದಿಂದಾಗಿ ಶನಿವಾರ ಕಂಪನಿಯ ನೆಟ್ವರ್ಕ್ನಲ್ಲಿ ಅಡಚಣೆಯಾಗಿತ್ತು. ಇದರಿಂದ ವೆಬ್ಸೈಟ್ ಮತ್ತು ಟಿಕೆಟ್ ಬುಕಿಂಗ್ಗೆ ತೊಂದರೆಯಾಗಿತ್ತು. ಕೆಲವು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿತ್ತು. ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದರು.

‘ಪ್ರಸ್ತುತ ನೆಟ್ವರ್ಕ್ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿದೆ. ಪ್ರಯಾಣಿಕರಿಗೆ ಆಗಿರುವ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ’ ಎಂದು ಕಂಪನಿಯು ‘ಎಕ್ಸ್’ನಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.