ನವದೆಹಲಿ: ದೇಶದ ಕೈಗಾರಿಕಾ ಉತ್ಪಾದನೆಯು ಮಾರ್ಚ್ ತಿಂಗಳಿನಲ್ಲಿ ಶೇ 4.9ರಷ್ಟು ಬೆಳವಣಿಗೆ ದಾಖಲಿಸಿದೆ.

ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಈ ಬೆಳವಣಿಗೆಯು 2023ರ ಮಾರ್ಚ್‌ನಲ್ಲಿ ಶೇ 1.9ರಷ್ಟು ಪ್ರಗತಿ ಕಂಡಿತ್ತು ಎಂದು ಶುಕ್ರವಾರ ಬಿಡುಗಡೆಯಾಗಿರುವ ರಾಷ್ಟ್ರೀಯ ಸಾಂಖ್ಯಿಕ ಕಚೇರಿಯ ವರದಿ ತಿಳಿಸಿದೆ.

ಮಾರ್ಚ್‌ನಲ್ಲಿ ತಯಾರಿಕಾ ವಲಯವು ಶೇ 5.2ರಷ್ಟು ಬೆಳವಣಿಗೆ ಕಂಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬೆಳವಣಿಗೆಯು ಶೇ 1.5ರಷ್ಟಿತ್ತು. ಗಣಿಗಾರಿಕೆ ಶೇ 1.2ರಷ್ಟು ಹಾಗೂ ಇಂಧನ ವಲಯದ ಉತ್ಪಾದನೆಯು ಶೇ 8.6ರಷ್ಟು ಹೆಚ್ಚಳವಾಗಿದೆ.

2023–24ನೇ ಆರ್ಥಿಕ ವರ್ಷದಲ್ಲಿ ಕೈಗಾರಿಕಾ ಉತ್ಪಾದನೆಯು ಶೇ 5.8ರಷ್ಟು ಬೆಳವಣಿಗೆ ಕಂಡಿದ್ದರೆ, 2022–23ನೇ ಹಣಕಾಸು ವರ್ಷದಲ್ಲಿ ಶೇ 5.2ರಷ್ಟು ಪ್ರಗತಿ ದಾಖಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.