ನವದೆಹಲಿ: ದೇಶದ ಕೈಗಾರಿಕಾ ಉತ್ಪಾದನೆಯು ಪ್ರಸಕ್ತ ವರ್ಷದ ಫೆಬ್ರುವರಿ ತಿಂಗಳಿನಲ್ಲಿ ಶೇ 5.7ರಷ್ಟು ಬೆಳವಣಿಗೆ ದಾಖಲಿಸಿದೆ.

ಕೈಗಾರಿಕಾ ಉತ್ಪಾದನೆ ಸೂಚ್ಯಂಕ (ಐಐಪಿ) ಆಧಾರದ ಮೇಲೆ ಲೆಕ್ಕ ಹಾಕುವ ಈ ಬೆಳವಣಿಗೆಯು 2023ರ ಫೆಬ್ರುವರಿಯಲ್ಲಿ ಶೇ 6ರಷ್ಟು ದಾಖಲಾಗಿತ್ತು ಎಂದು ಶುಕ್ರವಾರ ಬಿಡುಗಡೆಯಾಗಿರುವ ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯದ ವರದಿ ತಿಳಿಸಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ 5.9ರಷ್ಟಿದ್ದ ತಯಾರಿಕಾ ವಲಯದ ಬೆಳವಣಿಗೆಯು ಶೇ 5ಕ್ಕೆ ಕುಗ್ಗಿದೆ. ಆದರೆ, ಗಣಿಗಾರಿಕೆ ಶೇ 8ರಷ್ಟು ಹಾಗೂ ಇಂಧನ ವಲಯದ ಉತ್ಪಾದನೆಯು ಶೇ 7.5ರಷ್ಟು ಏರಿಕೆಯಾಗಿದೆ. ವಿದ್ಯುತ್ ವಲಯದ ಉತ್ಪಾದನೆಯು ಶೇ 7.5ರಷ್ಟು ಹೆಚ್ಚಳವಾಗಿದೆ ಎಂದು ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.