ಮುಂಬೈ: ದೇಶದ ಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್‌ನ ಮಾಜಿ ಮುಖ್ಯಸ್ಥ ರತನ್ ಟಾಟಾ ಅವರಿಗೆ ‘ಉದ್ಯೋಗ ರತ್ನ‘ ಪ್ರಶಸ್ತಿ ನೀಡುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಣೆ ಮಾಡಿದೆ.

ಪ್ರಶಸ್ತಿಯ ಮೊದಲನೆ ಅವತರಣಿಕೆ ಇದಾಗಿದ್ದು, ಮಹಾರಾಷ್ಟ್ರ ಕಾರ್ಖಾನೆ ಸಚಿವ ಸಾವಂತ್ ಅವರು ವಿಧಾನ ಪರಿಷತ್‌ನಲ್ಲಿ ಈ ಘೋಷಣೆ ಮಾಡಿದ್ದಾರೆ.

ಅಲ್ಲದೆ ಇದರ ಜತೆಗೆ ಯುವ, ಮಹಿಳೆ ಹಾಗೂ ಮರಾಠಿ ಉದ್ಯಮಿಗಳಿಗೂ ಪ್ರಶಸ್ತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

‘ಖ್ಯಾತನಾಮರಿಗೆ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಪ್ರದಾನ ಮಾಡುವ ಹಾಗೆ, ರತನ್ ಟಾಟಾ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ ನೀಡಲು ಸರ್ಕಾರ ತೀರ್ಮಾನಿಸಿದೆ’ ಎಂದು ಅವರು ಹೇಳಿದರು.

‘ಈ ಬಗ್ಗೆ ಮುಖ್ಯಮಂತ್ರಿ ಏಕನಾಥ ಶಿಂದೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಉಪಮುಖ್ಯಮಂತ್ರಿಗಳಾದ ದೇವೇಂದ್ರ ಫಡಣವೀಸ್, ಅಜಿತ್ ಪವಾರ್ ಹಾಗೂ ನಾನು ಭಾಗಿಯಾಗಿದ್ದೆವು‘ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.