ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿಬುಧವಾರ ಆರಂಭವಾದ ಇನ್ವೆಸ್ಟ್ ಕರ್ನಾಟಕ 2022: ಜಾಗತಿಕ ಹೂಡಿಕೆದಾರರ ಸಮ್ಮೇಳನದಲ್ಲಿ ಪ್ರಮುಖ ಹೂಡಿಕೆದಾರರು ತಮ್ಮ ಮುಂದಿನ ಯೋಜನೆಗಳ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು.

ಕರ್ನಾಟಕದಲ್ಲಿ ಹೆಚ್ಚುವರಿಯಾಗಿ ಒಂದು ಲಕ್ಷ ಕೋಟಿ ಹೂಡಿಕೆ ಮಾಡುವ ಯೋಜನೆ ಇದೆ ಎಂದು ಜೆಎಸ್‌ಡಬ್ಲ್ಯೂ ಸಮೂಹದ ಅಧ್ಯಕ್ಷ ಸಜ್ಜನ್ ಜಿಂದಾಲ್ ಹೇಳಿದರು.

ನಾವು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಒಟ್ಟು ಐವತ್ತು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದೇವೆ. ಇದರಲ್ಲಿ ಹೆಚ್ಚಿನ ಪಾಲು ಕರ್ನಾಟಕದಲ್ಲಿ ಹೂಡಿಕೆ ಆಗಲಿದೆ ಎಂದು ಸ್ಟರ್ಲೈಟ್ ಪವರ್ ಕಂಪನಿಯ ಎಂ.ಡಿ ಪ್ರತೀಕ್ ಅಗರ್ವಾಲ್ ತಿಳಿಸಿದರು.

ಕರ್ನಾಟಕದಲ್ಲಿ ಏಳು ವರ್ಷಗಳ ಅವಧಿಯಲ್ಲಿ ಒಂದು ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದೇವೆ ಎಂದು ಅದಾನಿ ಪೋರ್ಟ್ಸ್ ಆ್ಯಂಡ್ ಎಸ್‌ಇಜೆಡ್ ಲಿಮಿಟೆಡ್ ಸಿಇಒ ಕರಣ್ ಅದಾನಿ ಹೇಳಿದರು.

ಮುಂದಿನ ಎರಡು ವರ್ಷಗಳಲ್ಲಿ ಕರ್ನಾಟಕದಲ್ಲಿ ಇಪ್ಪತ್ತು ಸಾವಿರಕೋಟಿ ಹೂಡಿಕೆ ಮಾಡಲಾಗುವುದು ಎಂದು ಭಾರ್ತಿ ಎಂಟರ್‌ಪ್ರೈಸಸ್‌ನ ಉಪಾಧ್ಯಕ್ಷ ರಾಜನ್ ಭಾರ್ತಿ ಮಿತ್ತಲ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.