ಬೆಂಗಳೂರು: ಕರ್ನಾಟಕದಲ್ಲಿ ಏರ್ಬಸ್ ಉತ್ಪಾದನಾ ಘಟಕವನ್ನು ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫ್ರಾನ್ಸ್ ಕಂಪನಿಗಳಿಗೆ ಆಹ್ವಾನ ನೀಡಿದರು.

ಫ್ರೆಂಚ್–ಇಂಡೋ ಚೇಂಬರ್ ಆಫ್ ಕಾಮರ್ಸ್ಗೆ ಗುರುವಾರ ಚಾಲನೆ ನೀಡಿ ಮಾತನಾಡಿದ ಅವರು, ಫ್ರಾನ್ಸ್ ಏರೋಸ್ಪೇಸ್ ಕಂಪನಿಗಳ ರಾಜ್ಯದಲ್ಲಿವೆ. ವಿಮಾನದ ಬಿಡಿ ಭಾಗಗಳ ಉತ್ಪಾದನೆ ಕರ್ನಾಟಕದಲ್ಲಿ ನಡೆಯುತ್ತಿದೆ. ಪೂರ್ಣ ಪ್ರಮಾಣದ ವಿಮಾನ ತಯಾರಿಸುವ ಗುರಿಯನ್ನು ರಾಜ್ಯ ಹೊಂದಿದೆ. ಏರ್ಬಸ್ ಮತ್ತು ಬೋಯಿಂಗ್ ಕಂಪನಿಗಳು ವಿಮಾನ ತಯಾರಿಕೆ ಕ್ಷೇತ್ರದಲ್ಲಿವೆ. ಏರ್ಬಸ್ ಉತ್ಪಾದನೆ ಘಟಕವನ್ನು ಇಲ್ಲಿ ಆರಂಭಿಸಿದರೆ ಅಗತ್ಯ ನೆರವು ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ಭಾರತದಲ್ಲಿರುವ ಫ್ರಾನ್ಸ್ ರಾಯಭಾರಿ ಎಮೆನುಲಾ, ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹಾಜರಿದ್ದರು.

ರಾಜ್ಯದಲ್ಲೇ ಅತಿ ಹೆಚ್ಚು ಎಥೆನಾಲ್ ಉತ್ಪಾದನೆ: ವಿಜಯ್ ನಿರಾಣಿ

‘ಏಷ್ಯಾದಲ್ಲೇ ಅತಿ ಹೆಚ್ಚು ಎಥೆನಾಲ್ ಕರ್ನಾಟಕದಲ್ಲಿ ಉತ್ಪಾದನೆಯಾಗುತ್ತಿದೆ. ಈ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆಗೆ ಸಾಕಷ್ಟು ಅವಕಾಶಗಳಿದ್ದು, ಉದ್ಯಮಿಗಳು ಆಸಕ್ತಿ ವಹಿಸಬೇಕು’ ಎಂದು ಎಂಆರ್ಎನ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಎಂ ನಿರಾಣಿ ಹೇಳಿದರು. ‘ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅವಲಂಬನೆ ಕಡಿಮೆ ಮಾಡಲು ಎಥೆನಾಲ್ ಬಳಕೆ ಹೆಚ್ಚಾಗಬೇಕು. ಪೆಟ್ರೋಲ್, ಡೀಸೆಲ್ ಜತೆಗೆ ಶೇ 20ರಷ್ಟು ಎಥೆನಾಲ್ ಮಿಶ್ರಣದ ಗುರಿಯನ್ನು ಈಗಾಗಲೇ ಸಾಧಿಸಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.