ನವದೆಹಲಿ: ಆದಾಯ ತೆರಿಗೆ ಇಲಾಖೆಯು (ಐ.ಟಿ) 2019–20ರಿಂದ 2022-23ರವರೆಗೆ ನಡೆಸಿದ ಒಟ್ಟು 2,980 ದಾಳಿ ಪ್ರಕರಣಗಳಲ್ಲಿ ₹5,095 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದೆ ಎಂದು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ತಿಳಿಸಿದ್ದಾರೆ.

ಸೋಮವಾರ ಲೋಕಸಭೆಗೆ ಅವರು ಈ ಮಾಹಿತಿ ನೀಡಿದ್ದಾರೆ.

2019–20ರಲ್ಲಿ ಒಟ್ಟು 984 ದಾಳಿ ನಡೆಸಿದ್ದು, ₹1,289 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. 365 ಜನರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

2020–21ರಲ್ಲಿ 569 ದಾಳಿ ನಡೆಸಿದ್ದು, ₹881 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. 2021–22ರಲ್ಲಿ 689 ದಾಳಿ ನಡೆಸಿದ್ದು, ₹1,159 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ. 2022–23ರಲ್ಲಿ 741 ದಾಳಿ ನಡೆಸಿದ್ದು, ₹1,765 ಕೋಟಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.