ನವದೆಹಲಿ: ಆರು ವರ್ಷಗಳ ಹಿಂದೆ ಆರಂಭಗೊಂಡ ಪ್ರಧಾನ ಮಂತ್ರಿ ಜನಧನ ಯೋಜನೆಯ ಅಡಿ ಇದುವರೆಗೆ 40.05 ಕೋಟಿ ಖಾತೆಗಳನ್ನು ತೆರೆಯಲಾಗಿದೆ.

ಇಷ್ಟು ಖಾತೆಗಳಲ್ಲಿ ಜಮಾ ಆಗಿರುವ ಹಣದ ಒಟ್ಟು ಮೊತ್ತವು ₹ 1.30 ಲಕ್ಷ ಕೋಟಿಗಿಂತ ಹೆಚ್ಚು. ‘ವಿಶ್ವದ ಅತಿದೊಡ್ಡ ಆರ್ಥಿಕ ಒಳಗೊಳ್ಳುವಿಕೆ ಕಾರ್ಯಕ್ರಮದ ಅಡಿ ಇನ್ನೊಂದು ಮೈಲಿಗಲ್ಲಿ ದಾಟಲಾಗಿದೆ. ಆರ್ಥಿಕ ಒಳಗೊಳ್ಳುವಿಕೆಯ ಕಾರ್ಯಕ್ರಮವನ್ನು ಕಟ್ಟಕಡೆಯ ವ್ಯಕ್ತಿಯವರೆಗೂ ತೆಗೆದುಕೊಂಡು ಹೋಗಲು ಬದ್ಧರಾಗಿದ್ದೇವೆ’ ಎಂದು ಕೇಂದ್ರ ಹಣಕಾಸು ಸೇವೆಗಳ ಇಲಾಖೆ ಹೇಳಿದೆ.

ಈ ಯೋಜನೆಯನ್ನು 2014ರ ಆಗಸ್ಟ್ 28ರಂದು ಆರಂಭಿಸಲಾಯಿತು. ಎಲ್ಲರಿಗೂ ಬ್ಯಾಂಕಿಂಗ್ ಸೌಲಭ್ಯ ಸಿಗುವಂತೆ ಮಾಡುವುದು ಈ ಯೋಜನೆಯ ಉದ್ದೇಶ. ಈ ಯೋಜನೆಯ ಅಡಿ ತೆರೆದ ಉಳಿತಾಯ ಖಾತೆಗಳಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳುವ ಅಗತ್ಯವಿಲ್ಲ.

ಜನಧನ ಖಾತೆ ಹೊಂದಿರುವವರ ಪೈಕಿ ಶೇಕಡ 50ರಷ್ಟಕ್ಕಿಂತ ಹೆಚ್ಚಿನವರು ಮಹಿಳೆಯರು. ಕೋವಿಡ್–19 ಕಾಯಿಲೆಯಿಂದ ಸೃಷ್ಟಿಯಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ‘ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ’ಯ ಅಡಿ ಬಡವರಿಗೆ ಪ್ರತಿ ತಿಂಗಳು ₹ 1,500 ಮೊತ್ತವನ್ನು ಮೂರು ಕಂತುಗಳಲ್ಲಿ ಪಾವತಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.