ಬೆಂಗಳೂರು: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ಕಂಪನಿಯ ಆಡಳಿತ ಮಂಡಳಿಯು, ಹಿರಿಯ ಬ್ಯಾಂಕರ್ ಕೆ.ವಿ. ಕಾಮತ್ ಅವರನ್ನು ಮಂಡಳಿಯ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲು ಶಿಫಾರಸು ಮಾಡಿದೆ. ಈ ನೇಮಕಕ್ಕೆ ಷೇರುದಾರರ ಸಮ್ಮತಿ ಬೇಕಿದೆ. ಕಾಮತ್ ಅವರು ಕುಂದಾಪುರ ಮೂಲದವರು.

ಕಾಮತ್ ಅವರನ್ನು ಐದು ವರ್ಷಗಳ ಅವಧಿಗೆ ಸ್ವತಂತ್ರ ನಿರ್ದೇಶಕರನ್ನಾಗಿ ನೇಮಿಸಲು ಶುಕ್ರವಾರ ನಡೆದ ಆಡಳಿತ ಮಂಡಳಿ ಸಭೆಯು ಶಿಫಾರಸು ಮಾಡಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಆರ್‌ಐಎಲ್‌ನ ಹಣಕಾಸು ಸೇವಾ ಅಂಗಸಂಸ್ಥೆಯಾಗಿರುವ ರಿಲಯನ್ಸ್ ಸ್ಟ್ರ್ಯಾಟೆಜಿಕ್ ಇನ್ವೆಸ್ಟ್‌ಮೆಂಟ್ಸ್ ಲಿಮಿಟೆಡ್‌ನ ಕಾರ್ಯನಿರ್ವಾಹಕೇತರ ಅಧ್ಯಕ್ಷ ಹಾಗೂ ಸ್ವತಂತ್ರ ನಿರ್ದೇಶಕರನ್ನಾಗಿಯೂ ನೇಮಕ ಮಾಡಲಾಗಿದೆ. ಈ ಕಂಪನಿಯನ್ನು ಜಿಯೊ ಫೈನಾನ್ಶಿಯಲ್ ಸರ್ವಿಸಸ್ ಎಂದು ಮರುನಾಮಕರಣ ಮಾಡಿ, ಷೇರುಪೇಟೆಯಲ್ಲಿ ನೋಂದಾಯಿಸಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.