ವಾಷಿಂಗ್ಟನ್: ಭಾರತ ಮೂಲದ ಅಜಯ್ ಬಂಗಾ ಅವರು ವಿಶ್ವಬ್ಯಾಂಕ್‌ನ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರನ್ನು ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಭಿನಂದಿಸಿದ್ದಾರೆ.

ಈ ಬಗ್ಗೆ ಕಮಲಾ ಹ್ಯಾರಿಸ್ ಟ್ವಿಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಬಂಗಾ ಅವರ ಹಿಂದಿನ ಕೆಲಸಗಳನ್ನು ಶ್ಲಾಘಿಸಿರುವ ಕಮಲಾ, ಮುಂದಿನ ದಿನಗಳಲ್ಲಿ ಅವರಿಂದ ನಿರಂತರ ಕೆಲಸವನ್ನು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಅವರು ಜೂನ್ 2ರಿಂದ ಐದು ವರ್ಷಗಳ ಅವಧಿಗೆ ಈ ಹುದ್ದೆಯಲ್ಲಿ ಇರಲಿದ್ದಾರೆ.

ವಿಶ್ವ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಂಗಾ ಅವರ ಹೆಸರನ್ನು ಸೂಚಿಸುತ್ತಿರುವುದಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಫೆಬ್ರುವರಿಯಲ್ಲಿ ಪ್ರಕಟಿಸಿದ್ದರು. ಬಂಗಾ ಅವರಿಗೆ ಭಾರತ ಸರ್ಕಾರವು 2016ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿದೆ.

ವಿಶ್ವಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್ ಅವರ ಅಧಿಕಾರಾವಧಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಕೊನೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.