ಬೆಂಗಳೂರು: ತಯಾರಿಕಾ ವಲಯದಲ್ಲಿ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳಿಗೆ (ಎಂಎಸ್ಎಂಇ) ಬಜೆಟ್ನಲ್ಲಿ ಹಣಕಾಸಿನ ನೆರವು ಒದಗಿಸಲಾಗಿದೆ. ₹100 ಕೋಟಿ ವರೆಗಿನ ಕ್ರೆಡಿಟ್ ಗ್ಯಾರಂಟಿ ಯೋಜನೆಯು ಯಂತ್ರೋಪಕರಣಗಳ ಹೂಡಿಕೆಗೆ ಉತ್ತೇಜಿಸಲು ಮತ್ತು ಉತ್ಪಾದಕತೆ ಹೆಚ್ಚಿಸಲು ನೆರವಾಗಲಿದೆ ಎಂದು ಕಾಸಿಯಾ ತಿಳಿಸಿದೆ.

ಔಪಚಾರಿಕ ವಲಯದ ಉದ್ಯೋಗ ಉತ್ತೇಜಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಮೂರು ಉದ್ಯೋಗ ಸಂಯೋಜಿತ ಪ್ರೋತ್ಸಾಹ ಯೋಜನೆಗಳನ್ನು ಪ್ರಕಟಿಸಲಾಗಿದೆ. ಸರ್ಕಾರದ ಈ ನಿರ್ಧಾರ ಸ್ವಾಗತಾರ್ಹವಾಗಿದೆ ಎಂದು ಕಾಸಿಯಾ ಅಧ್ಯಕ್ಷ ಎಂ.ಜಿ. ರಾಜಗೋಪಾಲ್ ಹೇಳಿದ್ದಾರೆ.

ಸಾಲ ಮರು ಪಾವತಿಸಿದ ಉದ್ಯಮಿಗಳಿಗೆ ಮುದ್ರಾ ಯೋಜನೆಯಡಿ ನೀಡುವ ಸಾಲವನ್ನು ₹10 ಲಕ್ಷದಿಂದ ₹20 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದು ಸಣ್ಣ ಉದ್ಯಮಿಗಳು ತಮ್ಮ ಕಾರ್ಯಾಚರಣೆ ವಿಸ್ತರಿಸಲು ಸಹಕಾರಿಯಾಗಲಿದೆ. 100 ನಗರಗಳಲ್ಲಿ ‘ಪ್ಲಗ್ ಮತ್ತು ಪ್ಲೇ’ ಕೈಗಾರಿಕಾ ಪಾರ್ಕ್ಗಳ ಘೋಷಣೆಯು ಹೂಡಿಕೆಯನ್ನು ಆಕರ್ಷಿಸಲಿದೆ. ಜೊತೆಗೆ, ಕೈಗಾರಿಕಾ ಮೂಲ ಸೌಕರ್ಯದ ಅಭಿವೃದ್ಧಿಗೂ ನೆರವಾಗಲಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.