ನವದೆಹಲಿ: ಕಚ್ಚಾ ತೈಲ, ನೈಸರ್ಗಿಕ ಅನಿಲ ಮತ್ತು ವಿದ್ಯುತ್ ವಲಯದ ಉತ್ಪಾದನೆಯಲ್ಲಿನ ಇಳಿಕೆಯಿಂದಾಗಿ ದೇಶದ ಪ್ರಮುಖ 8 ಮೂಲಸೌಕರ್ಯ ವಲಯಗಳ ಬೆಳವಣಿಗೆಯು ಸೆಪ್ಟೆಂಬರ್ನಲ್ಲಿ ಶೇ 2ರಷ್ಟು ಇಳಿಕೆಯಾಗಿದೆ.

2023ರ ಸೆಪ್ಟೆಂಬರ್ನಲ್ಲಿ ಶೇ 9.5ರಷ್ಟು ದಾಖಲಾಗಿತ್ತು ಎಂದು ಕೇಂದ್ರ ಸರ್ಕಾರ ಬುಧವಾರ ತಿಳಿಸಿದೆ.

ಆಗಸ್ಟ್ನಲ್ಲಿ ಉತ್ಪಾದನಾ ಬೆಳವಣಿಗೆಯು ಶೇ 1.6ರಷ್ಟಾಗಿತ್ತು.

ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನ, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಈ ಎಂಟು ವಲಯಗಳಾಗಿವೆ.

2024–25ರ ಹಣಕಾಸು ವರ್ಷದ ಏಪ್ರಿಲ್–ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನ, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ಬೆಳವಣಿಗೆಯು ಶೇ 4.2ರಷ್ಟಾಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಶೇ 8.2ರಷ್ಟಾಗಿತ್ತು.

ಈ ವಲಯಗಳು ಕೈಗಾರಿಕಾ ಉತ್ಪಾದನಾ ಸೂಚ್ಯಂಕಕ್ಕೆ (ಐಐಪಿ) ಶೇ 40.27ರಷ್ಟು ಕೊಡುಗೆ ನೀಡುತ್ತವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.