ನವದೆಹಲಿ: ‘ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಆರೋಗ್ಯ ವಿಮಾ ವಲಯಕ್ಕೆ ಕಾಲಿಡಲಿದೆ. ಇದಕ್ಕಾಗಿ ಖಾಸಗಿ ಕಂಪನಿಯೊಂದನ್ನು ಸ್ವಾಧೀನಪಡಿಸಿಕೊಳ್ಳಲು ಚಿಂತನೆ ನಡೆಸಿದೆ’ ಎಂದು ಎಲ್‌ಐಸಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಸಿದ್ಧಾರ್ಥ ಮೊಹಂತಿ ತಿಳಿಸಿದ್ದಾರೆ.

ಗುರುವಾರ ತ್ರೈಮಾಸಿಕ ಫಲಿತಾಂಶದ ಬಿಡುಗಡೆ ವೇಳೆ ಮಾತನಾಡಿದ ಅವರು, ‘ಪ್ರತ್ಯೇಕವಾಗಿ ಆರೋಗ್ಯ ವಿಮಾ ವ್ಯವಹಾರ ನಡೆಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಖಾಸಗಿ ಕಂಪನಿಯೊಂದರಲ್ಲಿ ಹೆಚ್ಚಿನ ಷೇರುಗಳನ್ನು ಖರೀದಿಸುವ ಬಗ್ಗೆ ಚರ್ಚಿಸಲಾಗಿದೆ’ ಎಂದು ಹೇಳಿದ್ದಾರೆ.

ಕಳೆದ ಆರ್ಥಿಕ ವರ್ಷದಂತೆಯೇ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೂ ಈಕ್ವಿಟಿ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಭಾರತೀಯ ವಿಮೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ (ಐಆರ್‌ಡಿಎಐ) ನಿಯಮಾವಳಿ ಪ್ರಕಾರ ಒಂದೇ ಕಂಪನಿಗೆ ಜೀವ ವಿಮೆ ಮತ್ತು ಆರೋಗ್ಯ ವಿಮಾ ಸೌಲಭ್ಯ ಕಲ್ಪಿಸುವುದಕ್ಕೆ ಸಂಯೋಜಿತ ಪರವಾನಗಿ ನೀಡಲು ಅವಕಾಶವಿಲ್ಲ. ಹಾಗಾಗಿ, ಕೇಂದ್ರ ಸರ್ಕಾರವು ವಿಮಾ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಲ್‌ಐಸಿಗೆ ಈ ಪರವಾನಗಿ ನೀಡುವ ನಿರೀಕ್ಷೆಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.