ನವದೆಹಲಿ: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಈಕ್ವಿಟಿ ಮಾರುಕಟ್ಟೆಯಲ್ಲಿ ₹1.30 ಲಕ್ಷ ಕೋಟಿ ಹೂಡಿಕೆ ಮಾಡಲಿದೆ’ ಎಂದು ಎಲ್‌ಐಸಿ ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿಇಒ ಸಿದ್ಧಾರ್ಥ ಮೊಹಂತಿ ತಿಳಿಸಿದ್ದಾರೆ.

ಈಗಾಗಲೇ, ಏಪ್ರಿಲ್–ಜೂನ್ ಅವಧಿಯಲ್ಲಿ ₹38 ಸಾವಿರ ಕೋಟಿ ಹೂಡಿಕೆ ಮಾಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ₹23,300 ಕೋಟಿ ಹೂಡಿಕೆ ಮಾಡಿತ್ತು.

ಜೂನ್ ತ್ರೈಮಾಸಿಕದಲ್ಲಿ ಈಕ್ವಿಟಿ ಮಾರುಕಟ್ಟೆಯಲ್ಲಿನ ಹೂಡಿಕೆಯಿಂದ ₹15,500 ಕೋಟಿ ಲಾಭ ಗಳಿಸಿದೆ. ಹಿಂದಿನ ವರ್ಷದ ಇದೇ ಅವಧಿಗೆ ಹೋಲಿಸಿದರೆ ಲಾಭದಲ್ಲಿ ಶೇ 13.5ರಷ್ಟು ಏರಿಕೆಯಾಗಿದೆ.

‘2023–24ರಲ್ಲಿ ₹1.32 ಲಕ್ಷ ಕೋಟಿ ಹೂಡಿಕೆ ಮಾಡಲಾಗಿತ್ತು. ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೂಡಿಕೆ ಕುರಿತಂತೆ ಮಾರುಕಟ್ಟೆಯ ಸ್ಥಿತಿಗತಿ ಬಗ್ಗೆ ಅವಲೋಕನ ನಡೆಸುತ್ತಿದ್ದೇವೆ’ ಎಂದು ಮೊಹಂತಿ ತಿಳಿಸಿದ್ದಾರೆ.

ಜೂನ್ ಅಂತ್ಯಕ್ಕೆ ಎಲ್‌ಐಸಿ ಹೂಡಿಕೆ ಮಾಡಿರುವ ಕಂಪನಿಗಳ ಮಾರುಕಟ್ಟೆ ಮೌಲ್ಯವು ₹15 ಲಕ್ಷ ಕೋಟಿ ದಾಟಿದೆ ಎಂದು ಹೇಳಿದ್ದಾರೆ.

ಜೂನ್ ಅಂತ್ಯಕ್ಕೆ ಎಲ್‌ಐಸಿಯು 282 ಕಂಪನಿಗಳ ಷೇರುಗಳಲ್ಲಿ ಹೂಡಿಕೆ ಮಾಡಿದೆ. ಈ ಕಂಪನಿಗಳ ಸಂಪತ್ತಿನ ನಿರ್ವಹಣಾ ಮೌಲ್ಯವು ಕಳೆದ ಹಣಕಾಸು ವರ್ಷದ ಜೂನ್ ತ್ರೈಮಾಸಿಕದಲ್ಲಿ ₹46.11 ಲಕ್ಷ ಕೋಟಿ ಇತ್ತು. ಈ ಬಾರಿ ₹53.58 ಲಕ್ಷ ಕೋಟಿಗೆ ಏರಿಕೆಯಾಗಿದೆ. ಒಟ್ಟಾರೆ ಶೇ 16.22ರಷ್ಟು ಹೆಚ್ಚಳವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.