ನವದೆಹಲಿ: ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಅಧ್ಯಕ್ಷೆ ಮಾಧವಿ ಪುರಿ ಬುಚ್ ವಿರುದ್ಧ ಸಲ್ಲಿಸಿರುವ ದೂರಿಗೆ ಸಂಬಂಧಿಸಿದಂತೆ ಹೆಚ್ಚುವರಿ ದಾಖಲೆಗಳನ್ನು ಒಳಗೊಂಡ ನ್ಯಾಯಯುತವಾದ ಅಫಿಡೆವಿಟ್ ಸಲ್ಲಿಸಬೇಕು ಎಂದು ದೂರುದಾರರಿಗೆ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಲೋಕಪಾಲ ಸೂಚಿಸಿದೆ.

ಎರಡು ದೂರಿನಲ್ಲಿ ಅಮೆರಿಕದ ಶಾರ್ಟ್ ಸೆಲ್ಲರ್ ಕಂಪನಿ ಹಿಂಡನ್ಬರ್ಗ್ ರಿಸರ್ಚ್ ವರದಿಯನ್ನಷ್ಟೇ ಸಲ್ಲಿಸಲಾಗಿದೆ. ಆದರೆ, ಈ ವರದಿಯೊಂದೇ ತನಿಖೆಗೆ ಆದೇಶಿಸಲು ಸಾಲುವುದಿಲ್ಲ ಎಂದು ಹೇಳಿದೆ. ಎಲ್ಲಿಯೂ ದೂರುದಾರರ ಹೆಸರನ್ನು ಉಲ್ಲೇಖಿಸಿಲ್ಲ.

ಲೋಕಪಾಲ ಕಾಯ್ದೆ 2013ರ ಸೆಕ್ಷನ್ 20ರ ಅನ್ವಯ ಮೇಲ್ನೋಟಕ್ಕೆ ನಮಗೆ ಭ್ರಷ್ಟಾಚಾರ ನಡೆದಿರುವುದು ಮನದಟ್ಟಾಗಬೇಕು. ಆಗಷ್ಟೇ ಪ್ರಾಥಮಿಕ ವಿಚಾರಣೆಗೆ ಆದೇಶಿಸಲು ಸಾಧ್ಯವಾಗಲಿದೆ. ಹಾಗಾಗಿ, ಸೂಕ್ತ ದಾಖಲೆಗಳನ್ನು ಸಲ್ಲಿಸಬೇಕಿದೆ ಎಂದು ಸೂಚಿಸಿದೆ.

ಅಲ್ಲದೆ, ಸೆಬಿ ಮುಖ್ಯಸ್ಥೆ ವಿರುದ್ಧದ ಆರೋಪವು ಭ್ರಷ್ಟಾಚಾರ ತಡೆ ಕಾಯ್ದೆ ವ್ಯಾಪ್ತಿಗೆ ಹೇಗೆ ಬರುತ್ತದೆ ಎಂಬುದನ್ನೂ ತೋರಿಸಬೇಕಿದೆ ಎಂದು ನಿರ್ದೇಶನ ನೀಡಿದೆ.

ಒಂದು ದೂರು ಹಿಂಡನ್ಬರ್ಗ್ ರಿಸರ್ಚ್ ವರದಿಯನ್ನಷ್ಟೇ ಆಧರಿಸಿದೆ. ಇ–ಮೇಲ್ ಮೂಲಕ ಸಲ್ಲಿಸಿರುವ ಮತ್ತೊಂದು ದೂರಿನಲ್ಲಿ ಹಿಂಡನ್ಬರ್ಗ್ ವರದಿ ಬಿಡುಗಡೆ ದಿನವೇ ಡೌನ್ಲೋಡ್ ಮಾಡಿಕೊಂಡು ದೂರು ಸಲ್ಲಿಸಲಾಗಿದೆ ಎಂದು ಹೇಳಿದೆ.

ಮುಂದಿನ ವಿಚಾರಣೆಯನ್ನು ಅಕ್ಟೋಬರ್ 17ರಂದು ಕೈಗೆತ್ತಿಕೊಳ್ಳಲಿದೆ.

ಸಂಸದೆ ಮಹುವಾ ದೂರು

ಸೆಪ್ಟೆಂಬರ್ 13ರಂದು ಸಂಸದೆ ಮಹುವಾ ಮೊಯಿತ್ರಾ ಅವರು, ಸೆಬಿ ಅಧ್ಯಕ್ಷೆ ವಿರುದ್ಧ ಲೋಕಪಾಲಕ್ಕೆ ದೂರು ಸಲ್ಲಿಸಲಾಗಿದೆ. ದೂರಿನ ಬಗ್ಗೆ ಪ್ರಾಥಮಿಕ ತನಿಖೆ ನಡೆಸುವ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ಅಥವಾ ಸಿಬಿಐಗೆ ಸೂಚಿಸಬೇಕು. ಬಳಿಕ ಪೂರ್ಣ ಪ್ರಮಾಣದಲ್ಲಿ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದರು. ಆನ್ಲೈನ್ ಮತ್ತು ಭೌತಿಕವಾಗಿ ದೂರು ಸಲ್ಲಿಸಲಾಗಿದೆ ಎಂದು ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದ್ದರು.

ಅದಾನಿ ಸಮೂಹದ ಸಾಗರೋತ್ತರ ಹೂಡಿಕೆಯಲ್ಲಿ ಮಾಧವಿ ಪುರಿ ಬುಚ್ ಮತ್ತು ಅವರ ಪತಿ ಧವಳ್ ಬುಚ್ ಪಾಲುದಾರಿಕೆ ಹೊಂದಿದ್ದಾರೆ ಎಂದು ಹಿಂಡನ್ಬರ್ಗ್ ರಿಸರ್ಚ್ ಆರೋಪಿಸಿತ್ತು. ಬುಚ್ ದಂಪತಿ ಈ ಆರೋಪವನ್ನು ಅಲ್ಲಗೆಳೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.