ಮುಂಬೈ: ಐಸಿಐಸಿಐ ಬ್ಯಾಂಕ್‌ನ ನಿವ್ವಳ ಲಾಭವು ಪ್ರಸಕ್ತ ಹಣಕಾಸು ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಶೇ 36ರಷ್ಟು ಹೆಚ್ಚಾಗಿ ₹10,896 ಕೋಟಿಗೆ ತಲುಪಿದೆ.

ಆದಾಯದಲ್ಲಿ ಹೆಚ್ಚಳ ಮತ್ತು ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತದಲ್ಲಿ ಇಳಿಕೆ ಆಗಿರುವುದರಿಂದ ಈ ಮಟ್ಟದ ಬೆಳವಣಿಗೆ ಸಾಧ್ಯವಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಬ್ಯಾಂಕ್‌ನ ವರಮಾನವು ₹31,088 ಕೋಟಿಯಿಂದ ₹40,697 ಕೋಟಿಗೆ ಏರಿಕೆ ಕಂಡಿದೆ ಎಂದು ಷೇರುಪೇಟೆಗೆ ಮಾಹಿತಿ ನೀಡಿದೆ. ನಿವ್ವಳ ಬಡ್ಡಿ ವರಮಾನ ಶೇ 23ರಷ್ಟು ಹೆಚ್ಚಾಗಿದೆ.

ಭವಿಷ್ಯದಲ್ಲಿ ಎದುರಾಗಬಹುದಾದ ಆರ್ಥಿಕ ನಷ್ಟ ಭರಿಸಲು ತೆಗೆದಿರಿಸುವ ಮೊತ್ತವು ₹1,644 ಕೊಟಿಯಿಂದ ₹582 ಕೋಟಿಗೆ ಇಳಿಕೆ ಕಂಡಿದೆ. ವಸೂಲಾಗದ ಸಾಲದ ಸರಾಸರಿ ಪ್ರಮಾಣವು (ಜಿ ಎನ್‌ಪಿಎ) ಶೇ 3.19ರಿಂದ ಶೇ 2.48ಕ್ಕೆ ಇಳಿಕೆ ಕಂಡಿದೆ ಎಂದು ಬ್ಯಾಂಕ್ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.