ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ 21 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ನೀಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ₹16 ಕೋಟಿ ಮೀಸಲಿಡಲಾಗಿದೆ ಎಂದು ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಮಾತೃಸಂಸ್ಥೆಯಾದ ಮಲಬಾರ್ ಗ್ರೂಪ್ ತಿಳಿಸಿದೆ.

ಮುಂಬೈನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಸ್ಕಾಲರ್ ಪ್ರೋಗ್ರಾಂ–2024ರ ಕಾರ್ಯಕ್ರಮದಲ್ಲಿ ಮಾತನಾಡಿದ ಮಲಬಾರ್ ಸಮೂಹದ ಅಧ್ಯಕ್ಷ ಎಂ.ಪಿ. ಅಹ್ಮದ್, ‘2007ರಲ್ಲಿ ಸಿಎಸ್‌ಆರ್ ನಿಧಿಯಡಿ ಮಲಬಾರ್ ರಾಷ್ಟ್ರೀಯ ವಿದ್ಯಾರ್ಥಿ ವೇತನ ಯೋಜನೆಯನ್ನು ಆರಂಭಿಸಲಾಯಿತು. ಅಂದಿನಿಂದ ಇಂದಿನವರೆಗೂ 95 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಗೆ ಹಣಕಾಸಿನ ನೆರವು ನೀಡಲಾಗಿದೆ. ಇದಕ್ಕಾಗಿ ₹60 ಕೋಟಿ ವ್ಯಯಿಸಲಾಗಿದೆ’ ಎಂದು ವಿವರಿಸಿದರು.

ಮಹಿಳೆಯರ ಸಬಲೀಕರಣಕ್ಕೆ ಕಂಪನಿಯು ಒತ್ತು ನೀಡಿದೆ. ಅಲ್ಲದೆ, ಹಲವು ಸಾಮಾಜಿಕ ಕೆಲಸಗಳನ್ನು ಮಾಡುತ್ತಿದೆ ಎಂದು ಹೇಳಿದರು.

ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಲಬಾರ್ ಸಮೂಹದ ಉಪಾಧ್ಯಕ್ಷ ಅಬ್ದುಲ್ ಸಲಾಂ ಕೆ.ಪಿ., ಕಾರ್ಯ ನಿರ್ವಾಹಕ ನಿರ್ದೇಶಕ ನಿಶಾದ್ ಎ.ಕೆ., ಕಾರ್ಯಾಚರಣೆಯ ವ್ಯವಸ್ಥಾಪಕ ನಿರ್ದೇಶಕ ಒ. ಏಷರ್, ಮಹೇಂದ್ರ ಬ್ರದರ್ಸ್‌ನ ನಿರ್ದೇಶಕ ಶೌನಕ್ ಪಾರಿಖ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.