ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಆರನೇ ಅತಿದೊಡ್ಡ ಆಭರಣ ಸಮೂಹ ಸಂಸ್ಥೆಯಾಗಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್, 2023–24ನೇ ಆರ್ಥಿಕ ವರ್ಷದಲ್ಲಿ ಒಟ್ಟು ₹51,218 ಕೋಟಿ ವಹಿವಾಟು ನಡೆಸಿದ್ದು, ಹೊಸ ಮೈಲಿಗಲ್ಲು ಸ್ಥಾಪಿಸಿದೆ.

ಪ್ರಸಕ್ತ ವರ್ಷದಲ್ಲಿ ನ್ಯೂಜಿಲೆಂಡ್, ಈಜಿಫ್ಟ್, ಬಾಂಗ್ಲಾದೇಶ ಮತ್ತು ಯೂರೋಪ್ನ ಇತರೆ ಪ್ರದೇಶಗಳಲ್ಲಿ ಹೊಸ ಮಳಿಗೆ ತೆರೆಯಲು ನಿರ್ಧರಿಸಲಾಗಿದೆ. ಒಂದು ವರ್ಷದೊಳಗೆ 100ಕ್ಕೂ ಹೆಚ್ಚು ಹೊಸ ಮಳಿಗೆಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ಎಂದು ಕಂಪನಿ ತಿಳಿಸಿದೆ.

ಸದ್ಯ 26 ದೇಶಗಳಲ್ಲಿ 21 ಸಾವಿರ ಉದ್ಯೋಗಿಗಳಿದ್ದಾರೆ. ಹೊಸದಾಗಿ 7 ಸಾವಿರ ಉದ್ಯೋಗಿಗಳ ನೇಮಕಕ್ಕೆ ನಿರ್ಧರಿಸಲಾಗಿದೆ. ಜಾರ್ಖಂಡ್, ಗೋವಾ, ಅಸ್ಸಾಂ, ತ್ರಿಪುರಾ, ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಮಳಿಗೆ ತೆರೆಯಲು ಸಿದ್ಧತೆ ನಡೆದಿದೆ ಎಂದು ಹೇಳಿದೆ.

ಮಲಬಾರ್ ಗ್ರೂಪ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆಯಡಿ (ಸಿಎಸ್ಆರ್) ₹234 ಕೋಟಿ ಮೊತ್ತವನ್ನು ಜನೋಪಕಾರಿ ಚಟುವಟಿಕೆಗಳಿಗೆ ವಿನಿಯೋಗಿಸಲಾಗಿದೆ ಎಂದು ವಿವರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.