ನವದೆಹಲಿ (ಪಿಟಿಐ): ತಮಿಳುನಾಡಿನ ಶ್ರೀಪೆರಂಬದೂರು ಬಳಿಯ ಸ್ಯಾಮ್ಸಂಗ್ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ತಯಾರಿಕಾ ಘಟಕದಲ್ಲಿ ನಡೆಯುತ್ತಿರುವ ಕಾರ್ಮಿಕರ ಸಮಸ್ಯೆ ಪರಿಹರಿಸಲು ತಮಿಳುನಾಡು ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಬೇಕಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹೇಳಿದ್ದಾರೆ.

ಈ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.

ಕಾರ್ಮಿಕರ ಪ್ರತಿಭಟನೆಯಿಂದ ತಯಾರಿಕಾ ವಲಯದ ಮೇಲೆ ಪರಿಣಾಮ ಬೀರಲಿದೆ. ರಾಜ್ಯ ಸರ್ಕಾರವು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿ ತಯಾರಿಕೆಗೆ ಅನುಕೂಲಕರ ವಾತಾವರಣವನ್ನು ಕಲ್ಪಿಸಬೇಕಿದೆ ಎಂದು ಹೇಳಿದ್ದಾರೆ.

ಸಮಸ್ಯೆಯ ಪರಿಹಾರಕ್ಕೆ ಸಚಿವಾಲಯವು ಸಂಪೂರ್ಣ ಸಹಕಾರ ನೀಡಲಿದೆ ಎಂದು ತಿಳಿಸಿದ್ದಾರೆ.

ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸೆಪ್ಟೆಂಬರ್ 9ರಿಂದ ಸ್ಯಾಮ್ಸಂಗ್ ನೌಕರರು ಹೋರಾಟ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.