ನವದೆಹಲಿ: 2019–20ನೇ ಮೌಲ್ಯಮಾಪನ ವರ್ಷಕ್ಕೆ ಸಂಬಂಧಿಸಿದಂತೆ ₹779 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿರುವ ದೇಶದ ಪ್ರಮುಖ ವಾಹನ ತಯಾರಿಕಾ ಕಂಪನಿ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ಗೆ, ಆದಾಯ ತೆರಿಗೆ ಇಲಾಖೆಯು ಷೋಕಾಸ್ ನೋಟಿಸ್ ನೀಡಿದೆ.

‘ಈ ಮೊತ್ತದಲ್ಲಿ ಬಡ್ಡಿಯೂ ಸೇರಿದೆ. ತೆರಿಗೆ ಪಾವತಿ ಬಾಕಿ ಸಂಬಂಧ ಕಂಪನಿ ವಿರುದ್ಧ ದಂಡಾರ್ಹ ಪ್ರಕ್ರಿಯೆ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಇಲಾಖೆಯಿಂದ ಈ ನೋಟಿಸ್ ನೀಡಲಾಗಿದೆ’ ಎಂದು ಕಂಪನಿಯು ಷೇರುಪೇಟೆಗೆ ತಿಳಿಸಿದೆ.

ನೋಟಿಸ್ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆಯ ಮೇಲ್ಮನವಿ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಲಾಗುವುದು. ನೋಟಿಸ್ನಿಂದ ಕಂಪನಿಯ ಹಣಕಾಸು ಅಥವಾ ಕಾರ್ಯಾಚರಣೆ ಸೇರಿ ಯಾವುದೇ ಚಟುವಟಿಕೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.