ಬೆಂಗಳೂರು: ಮೇಘಾ ಎಂಜಿನಿಯರಿಂಗ್ ಮತ್ತು ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಎಂಇಐಎಲ್) ಮಹಾರಾಷ್ಟ್ರ ರಾಜ್ಯ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ಜೊತೆಗೆ 4 ಸಾವಿರ ಮೆಗಾವಾಟ್ ಸಾಮರ್ಥ್ಯದ ಎರಡು ಪ್ರಮುಖ ಜಲ ವಿದ್ಯುತ್ ಉತ್ಪಾದನಾ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಂಡಿದೆ.

ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಜಲ ಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ದೀಪಕ್ ಕಪೂರ್ ಈ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದರು. ಕಂಪನಿಯ ಅಧ್ಯಕ್ಷ ಆರ್.ವಿ.ಆರ್. ಕಿಶೋರ್ ಉಪಸ್ಥಿತರಿದ್ದರು.

ಮಹಾರಾಷ್ಟ್ರದ ನಂದುರ್ಬಾರ್ ಜಿಲ್ಲೆ ಮತ್ತು ಛತ್ರಪತಿ ಸಂಭಾಜಿನಗರ ಜಿಲ್ಲೆಯಲ್ಲಿ ಈ ಯೋಜನೆಗಳು ಅನುಷ್ಠಾನಗೊಳ್ಳಲಿವೆ. ಈ ಎರಡೂ ಯೋಜನೆಗಳ ವೆಚ್ಚ ₹21,100 ಕೋಟಿ ಆಗಿದೆ. ಸುಮಾರು 2,500 ಉದ್ಯೋಗ ಸೃಷ್ಟಿಯಾಗಲಿವೆ ಎಂದು ಕಂಪನಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.