ನವದೆಹಲಿ (ಪಿಟಿಐ): ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್ನಿಂದ ಅಕ್ಟೋಬರ್ 10ರ ವರೆಗೆ ₹11.25 ಲಕ್ಷ ಕೋಟಿ ನೇರ ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ₹5.98 ಲಕ್ಷ ಕೋಟಿ ಹಾಗೂ ಕಾರ್ಪೊರೇಟ್ ತೆರಿಗೆ ಸಂಗ್ರಹ ₹4.94 ಲಕ್ಷ ಕೋಟಿ ಆಗಿದೆ. ₹30,630 ಕೋಟಿ ಷೇರು ವಹಿವಾಟು ತೆರಿಗೆ (ಎಸ್ಟಿಟಿ) ಹಾಗೂ ₹2,150 ಕೋಟಿ ಇತರೆ ತೆರಿಗೆ ಸಂಗ್ರಹವಾಗಿದೆ.

ಕಳೆದ ವರ್ಷದ ಇದೇ ಅವಧಿಯಲ್ಲಿ ₹9.15 ಲಕ್ಷ ಕೋಟಿ ಸಂಗ್ರಹವಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 18.3ರಷ್ಟು ಏರಿಕೆಯಾಗಿದೆ.

ಒಟ್ಟಾರೆ ₹2.31 ಲಕ್ಷ ಕೋಟಿ ತೆರಿಗೆ ಮರುಪಾವತಿ ಮಾಡಲಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಮರುಪಾವತಿಯಲ್ಲಿ ಶೇ 46ರಷ್ಟು ಹೆಚ್ಚಳವಾಗಿದೆ.

ಇದೇ ಅವಧಿಯಲ್ಲಿ ನೇರ ತೆರಿಗೆಯ ಸರಾಸರಿ ಸಂಗ್ರಹವು ಶೇ 22.3ರಷ್ಟು ಏರಿಕೆಯಾಗಿದ್ದು, ಒಟ್ಟು ₹13.57 ಲಕ್ಷ ಕೋಟಿ ಸಂಗ್ರಹವಾಗಿದೆ. ಇದರಲ್ಲಿ ವೈಯಕ್ತಿಕ ಆದಾಯ ತೆರಿಗೆ ₹7.13 ಲಕ್ಷ ಕೋಟಿ ಹಾಗೂ ಕಾರ್ಪೊರೇಟ್ ತೆರಿಗೆ ಪಾಲು ₹6.11 ಲಕ್ಷ ಕೋಟಿ ಇದೆ.

2024–25ನೇ ಆರ್ಥಿಕ ವರ್ಷದಲ್ಲಿ ನೇರ ತೆರಿಗೆಗಳ ಮೂಲಕ ₹22.07 ಲಕ್ಷ ಕೋಟಿ ಸಂಗ್ರಹಿಸಲು ಕೇಂದ್ರ ಸರ್ಕಾರವು ಬಜೆಟ್ನಲ್ಲಿ ಗುರಿ ನಿಗದಿಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.