ನವದೆಹಲಿ: ‘ಸಂಸತ್ ಬಜೆಟ್ ಅಧಿವೇಶನ ಜುಲೈ 22ರಿಂದ ಆರಂಭವಾಗಲಿದ್ದು ಆಗಸ್ಟ್ 12ರವರೆಗೂ ನಡೆಯಲಿದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ ಹೇಳಿದ್ದಾರೆ.

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜುಲೈ 23ರಂದು ಬಜೆಟ್ ಮಂಡಿಸಲಿದ್ದಾರೆ.

‘ಬಜೆಟ್ ಅಧಿವೇಶನಕ್ಕಾಗಿ ಲೋಕಸಭೆ ಹಾಗೂ ರಾಜ್ಯಸಭೆಯನ್ನು ಒಳಗೊಂಡ ಸಂಸತ್ ಅಧಿವೇಶನ ಕರೆಯುವ ಕೇಂದ್ರ ಸರ್ಕಾರದ ಪ್ರಸ್ತಾವನೆಗೆ ರಾಷ್ಟ್ರಪತಿ ಒಪ್ಪಿಗೆ ಸೂಚಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಮೂರನೇ ಅವಧಿಯ ಮೊದಲ ಬಜೆಟ್ ಅಧಿವೇಶನ ಇದಾಗಿದೆ. ಈ ಬಾರಿ ಬಜೆಟ್ನಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಕ್ಷೇತ್ರದಲ್ಲಿ ಬಹಳಷ್ಟು ನಿರ್ಣಯಗಳನ್ನು ತೆಗೆದುಕೊಳ್ಳಲಾಗುವುದು ಎಂಬ ಅಂಶವುಳ್ಳ ರಾಷ್ಟ್ರಪತಿ ಅವರ ಭಾಷಣದ ನಂತರ ಬಜೆಟ್ ಮೇಲಿನ ನಿರೀಕ್ಷೆಗಳು ಗರಿಗೆದರಿವೆ.

ಲೋಕಸಭಾ ಚುನಾವಣೆಗೂ ಪೂರ್ವದಲ್ಲಿ ಮಧ್ಯಂತರ ಬಜೆಟ್ ಮಂಡಿಸಲಾಗಿತ್ತು.

ಹಣಕಾಸು ಸಚಿವರಾಗಿದ್ದ ಮೊರಾರ್ಜಿ ದೇಸಾಯಿ ಐದು ಬಾರಿ ವಾರ್ಷಿಕ ಹಾಗೂ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಈಗಾಗಲೇ, ನಿರ್ಮಲಾ ಅವರು ಈ ದಾಖಲೆಯನ್ನು ಸರಿಗಟ್ಟಿದ್ದಾರೆ. 2024–25ನೇ ಸಾಲಿನ ಬಜೆಟ್ ಮಂಡಿಸಿದರೆ ಸತತ ಏಳನೇ ಬಾರಿಗೆ ಬಜೆಟ್ ಮಂಡಿಸಿದ ದೇಶದ ಮೊದಲ ಹಣಕಾಸು ಸಚಿವೆ ಎಂಬ ದಾಖಲೆ ಬರೆಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.