ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೇಟಿಎಂ: ₹840 ಕೋಟಿ ನಷ್ಟ ದಾಖಲು

Published 19 ಜುಲೈ 2024, 12:52 IST
Last Updated 19 ಜುಲೈ 2024, 12:52 IST
ಅಕ್ಷರ ಗಾತ್ರ

ನವದೆಹಲಿ: ಪೇಟಿಎಂನ ಮಾತೃಸಂಸ್ಥೆ ಒನ್‌97 ಕಮ್ಯುನಿಕೇಷನ್‌ 2024–25ನೇ ಆರ್ಥಿಕ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ₹840 ಕೋಟಿ ನಷ್ಟ ದಾಖಲಿಸಿದೆ.

ಹಿಂದಿನ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹358 ಕೋಟಿ ನಷ್ಟವಾಗಿತ್ತು. ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ಲಿಮಿಟೆಡ್‌ (ಪಿಪಿಬಿಎಲ್‌) ಮೇಲೆ ಆರ್‌ಬಿಐ ನಿರ್ಬಂಧ ಹೇರಿದ್ದರಿಂದ ನಷ್ಟವಾಗಿದೆ ಎಂದು ಕಂಪನಿಯು, ಷೇರುಪೇಟೆಗೆ ಶುಕ್ರವಾರ ತಿಳಿಸಿದೆ.

ಈ ತ್ರೈಮಾಸಿಕದಲ್ಲಿ ಕಂಪನಿಯು ₹1,639 ಕೋಟಿ ವರಮಾನಗಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 33ರಷ್ಟು ಕುಸಿತವಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT