ನವದೆಹಲಿ: ಸತತ ಒಂಬತ್ತನ್ನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಕಂಡಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಪ್ರತಿ ಲೀಟರ್ಗೆ 25 ಪೈಸೆ ಹೆಚ್ಚಳವಾಗಿದೆ.

ಸದ್ಯ ದೆಹಲಿಯಲ್ಲಿ ಪೆಟ್ರೋಲ್ ದರ ₹89.54 ಕ್ಕೆ ತಲುಪಿದ್ದರೆ, ಡೀಸೆಲ್ ದರ 79.95 ಕ್ಕೆ ಏರಿಕೆಯಾಗಿದೆ. ಮುಂಬೈಯಲ್ಲಿ ಪೆಟ್ರೋಲ್ ₹95.46 ಹಾಗೂ ಡೀಸೆಲ್ ₹86.34 ರಷ್ಟಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್ಗೆ ₹92.28 ಆಗಿದ್ದು, ಡೀಸೆಲ್ ದರ ಪ್ರತಿ ಲೀಟರ್ಗೆ ₹84.49 ಆಗಿದೆ. ಕಳೆದ ಒಂದು ವಾರದಿಂದ ತೈಲ ದರ ಹೆಚ್ಚಾಗುತ್ತಿರುವುದರಿಂದ ಸರಕು ಸಾಗಣೆ ವೆಚ್ಚ ಏರಿಕೆಯಾಗಲಿದೆ. ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.