ನವದೆಹಲಿ: ಸರ್ಕಾರಿ ಸ್ವಾಮ್ಯದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೆಪ್ಟೆಂಬರ್ ತ್ರೈಮಾಸಿಕದ ಅಂತ್ಯಕ್ಕೆ ₹10.64 ಲಕ್ಷ ಕೋಟಿ ಸಾಲ ನೀಡಿದೆ. ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕಕ್ಕೆ ಹೋಲಿಸಿದರೆ ಸಾಲ ನೀಡಿಕೆಯಲ್ಲಿ ಶೇ 13ರಷ್ಟು ಏರಿಕೆಯಾಗಿದೆ ಎಂದು ಬ್ಯಾಂಕ್ ತಿಳಿಸಿದೆ.

ಬ್ಯಾಂಕ್ನ ಠೇವಣಿ ಸಂಗ್ರಹದಲ್ಲಿಯೂ ಏರಿಕೆಯಾಗಿದೆ. ಒಟ್ಟು ₹14.59 ಲಕ್ಷ ಕೋಟಿ ಠೇವಣಿ ಸಂಗ್ರಹಿಸಿದೆ. ಕಳೆದ ಆರ್ಥಿಕ ವರ್ಷದ ಇದೇ ತ್ರೈಮಾಸಿಕದಲ್ಲಿ ₹13.09 ಲಕ್ಷ ಕೋಟಿ ಠೇವಣಿ ಸಂಗ್ರಹಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಶೇ 11.41ರಷ್ಟು ಹೆಚ್ಚಳವಾಗಿದೆ ಎಂದು ಬ್ಯಾಂಕ್, ಗುರುವಾರ ಷೇರುಪೇಟೆಗೆ ಮಾಹಿತಿ ನೀಡಿದೆ.

ಕಳೆದ ವರ್ಷದ ಸೆಪ್ಟೆಂಬರ್ ಅಂತ್ಯಕ್ಕೆ ಬ್ಯಾಂಕ್ ₹22.51 ಲಕ್ಷ ಕೋಟಿ ವ್ಯವಹಾರ ನಡೆಸಿತ್ತು. ಈ ಬಾರಿ ₹25.23 ಲಕ್ಷ ಕೋಟಿ ವ್ಯವಹಾರ ನಡೆಸಿದೆ. ಒಟ್ಟಾರೆ ಶೇ 12ರಷ್ಟು ಏರಿಕೆಯಾಗಿದೆ ಎಂದು ವಿವರಿಸಿದೆ.

ಯೆಸ್ ಬ್ಯಾಂಕ್ ವರದಿ: ಖಾಸಗಿ ವಲಯದ ಯೆಸ್ ಬ್ಯಾಂಕ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹2.36 ಲಕ್ಷ ಕೋಟಿ ಸಾಲ ನೀಡಿದೆ. ಒಟ್ಟಾರೆ ಸಾಲ ನೀಡಿಕೆಯಲ್ಲಿ ಶೇ 13ರಷ್ಟು ಏರಿಕೆಯಾಗಿದೆ. ಠೇವಣಿ ಸಂಗ್ರಹದಲ್ಲಿ ಶೇ 18ರಷ್ಟು ಹೆಚ್ಚಳವಾಗಿದ್ದು, ಒಟ್ಟು ₹2.77 ಲಕ್ಷ ಕೋಟಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದೆ.

ಗ್ರಾಹಕರಿಂದ ಠೇವಣಿ ಸಂಗ್ರಹಿಸುವ ಬ್ಯಾಂಕ್ಗಳ ನಗದು ರಕ್ಷಣೆ ಅನುಪಾತ (ಎಲ್ಸಿಆರ್) ಶೇ 100ರಷ್ಟು ಇರಬೇಕಿದೆ. ಬ್ಯಾಂಕ್ನ ಎಲ್ಸಿಆರ್ ಪ್ರಮಾಣ ಶೇ 131.9ರಷ್ಟಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.