ನವದೆಹಲಿ: ವಾಣಿಜ್ಯ ಬಳಕೆಯ ಅಡುಗೆ ಅನಿಲದ ದರವನ್ನು ಪ್ರತಿ ಸಿಲಿಂಡರ್ಗೆ ಭಾನುವಾರ ₹102.50ರಷ್ಟು ಹೆಚ್ಚಳ ಮಾಡಲಾಗಿದೆ. ಈ ಮೂಲಕ ವಾಣಿಜ್ಯ ಬಳಕೆಯ 19 ಕೆ.ಜಿ. ತೂಕದ ಎಲ್ಪಿಜಿ ಸಿಲಿಂಡರ್ ಬೆಲೆಯು ₹2355.50ಕ್ಕೆ ಏರಿಕೆ ಆಗಿದೆ.

ಮನೆಗಳಲ್ಲಿ ಬಳಸುವ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸದ್ಯ 14.2 ಕೆ.ಜಿ. ತೂಕದ ಸಿಲಿಂಡರ್ ದರವು ಬೆಂಗಳೂರಿನಲ್ಲಿ ₹ 952 ಇದೆ.

₹2,253 ಇದ್ದ 19 ಕೆ.ಜಿ. ತೂಕದ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ಈಗ ₹2355.50 ತಲುಪಿದ್ದರೆ, 5 ಕೆ.ಜಿ. ತೂಕದ ಸಿಲಿಂಡರ್ಗೆ ₹655 ತೆರಬೇಕಿದೆ. ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್ಪಿಜಿ ಸಿಲಿಂಡರ್ ದರ 2,400 ರೂಪಾಯಿ ದಾಟಿದೆ.

ಇದನ್ನೂ ಓದಿ–ಚಿನ್ನಾಭರಣಗಳಿಗೆ ಹಾಲ್ಮಾರ್ಕ್ ಕಡ್ಡಾಯ: ಜೂನ್ 1ರಿಂದ ನಿಯಮದ ಎರಡನೇ ಹಂತ ಜಾರಿ

ಏಪ್ರಿಲ್ 1ರಂದು ವಾಣಿಜ್ಯ ಬಳಕೆ ಎಲ್ಪಿಜಿ ದರ ಪ್ರತಿ ಸಿಲಿಂಡರ್ಗೆ ₹250ರಷ್ಟು ಹೆಚ್ಚಿಸಲಾಗಿತ್ತು.

ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಇಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.