ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ರೆಪೊ ದರದಲ್ಲಿ 25 ಮೂಲಾಂಶ ಹೆಚ್ಚಳ ಮಾಡಲಾಗಿದ್ದು, ಶೇ 6.5ಕ್ಕೆ ನಿಗದಿಪಡಿಸಲಾಗಿದೆ.

ಕೇಂದ್ರ ಬಜೆಟ್ನ ಬಳಿಕ ನಡೆದ ಮೊದಲ ಹಣಕಾಸು ನೀತಿಯಲ್ಲಿ (ಎಂಪಿಸಿ), ಆರ್ಬಿಐ ಗವರ್ನರ್ ಶಕ್ತಿತಾಂತ ದಾಸ್ ರೆಪೊ ದರ ಹೆಚ್ಚಳವನ್ನು ಪ್ರಕಟಿಸಿದ್ದಾರೆ.

ಕಳೆದ ವರ್ಷ ಮೇ ತಿಂಗಳಿನಿಂದ ಆರ್ಬಿಐ ಆರನೇ ಸಲ ಬಡ್ಡಿದರವನ್ನು ಹೆಚ್ಚಿಸಿದೆ.

ಇದನ್ನೂ ಓದಿ: ಹಳೆ ಪಿಂಚಣಿ ವ್ಯವಸ್ಥೆಯಿಂದ ದೊಡ್ಡ ಸವಾಲು: ರಾಜ್ಯಗಳಿಗೆ ಆರ್ಬಿಐ ಕಿವಿಮಾತು

ದ್ವೈಮಾಸಿಕ ಹಣಕಾಸು ನೀತಿ ಸಮಿತಿಯ ಬಹುತೇಕ ಸದಸ್ಯರು ಹಣದುಬ್ಬರ ನಿಯಂತ್ರಣ ಮಾಡಲು ಬಡ್ಡಿದರ ಹೆಚ್ಚಳದ ಪರವಾಗಿಯೇ ಮತ ನೀಡಿದ್ದಾರೆ.

ಮುಂದಿನ ಹಣಕಾಸು ವರ್ಷದಲ್ಲಿ ಶೇ 6.4 ಬೆಳವಣಿಗೆ ದರ ಇರಲಿದೆ ಎಂದು ಆರ್ಬಿಐ ಅಂದಾಜಿಸಿದೆ.

ಪ್ರಸಕ್ತ ತ್ರೈಮಾಸಿಕದಲ್ಲಿ ಚಿಲ್ಲರೆ ಹಣದುಬ್ಬರದ ಪ್ರಮಾಣವು ಶೇ 6.5 ಆಗಿರಲಿದೆ ಎಂದು ದಾಸ್ ತಿಳಿಸಿದ್ದಾರೆ.

ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆಯೂ ಭಾರತ ಚೇತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.