ಡಿಸೆಂಬರ್‌ನಲ್ಲಿ ಕಡಿತ ಸಾಧ್ಯತೆ
‘ಪ್ರಸಕ್ತ ಆರ್ಥಿಕ ವರ್ಷದ ಜೂನ್ ತ್ರೈಮಾಸಿಕದಲ್ಲಿ ಹಣದುಬ್ಬರವು ಶೇ 4.9ರಷ್ಟಿದೆ. ಹಾಗಾಗಿ ರೆಪೊ ದರ ಕಡಿತ ಕುರಿತಂತೆ ಹಿಂದಿನ ಸಭೆಯಲ್ಲಿ ಕೈಗೊಂಡಿದ್ದ ಎಂಪಿಸಿ ಸದಸ್ಯರ ಮತ ಚಲಾವಣೆ ನಿರ್ಧಾರದಲ್ಲಿ ಬದಲಾವಣೆಯಾಗುವ ಸಾಧ್ಯತೆ ಕಡಿಮೆಯಿದೆ’ ಎಂದು ಐಸಿಆರ್‌ಎ ಮುಖ್ಯ ಅರ್ಥಶಾಸ್ತ್ರಜ್ಞೆ ಅದಿತಿ ನಾಯರ್ ಹೇಳಿದ್ದಾರೆ. ‘ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ಉತ್ತಮ ಮಳೆಯಾದರೆ ಆಹಾರ ಪದಾರ್ಥಗಳ ಬೆಲೆ ಇಳಿಕೆಯಾಗಲಿದೆ. ಜಾಗತಿಕ ಅಥವಾ ದೇಶೀಯ ಮಟ್ಟದಲ್ಲಿ ಬಿಕ್ಕಟ್ಟು ತಲೆದೋರದಿದ್ದರೆ ಅಕ್ಟೋಬರ್‌ನಲ್ಲಿ ನಡೆಯುವ ಎಂಪಿಸಿ ಸಭೆಯಲ್ಲಿ ರೆಪೊ ದರ ಕಡಿತಗೊಳಿಸಲು ಆರ್‌ಬಿಐ ನಿರ್ಧಾರಕೈಗೊಳ್ಳಲಿದೆ. ಡಿಸೆಂಬರ್‌ನಲ್ಲಿ ಶೇ 0.25ರಷ್ಟು ಕಡಿತಗೊಳಿಸಬಹುದು. ಬಳಿಕ 2025ರ ಫೆಬ್ರುವರಿಯಲ್ಲಿ ಇಷ್ಟೇ ಪ್ರಮಾಣದಲ್ಲಿ ಇಳಿಕೆ ಮಾಡುವ ಸಾಧ್ಯತೆಯಿದೆ’ ಎಂದು ಹೇಳಿದ್ದಾರೆ.